Wednesday, April 17, 2024

ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಪ್ರತಿ ತಿಂಗಳು ಹುಂಡಿ ತೆಗೆಯಬೇಕು: ಮುಜರಾಯಿ ಸಚಿವ ಕೋಟ 

 ಮಂಡ್ಯ: ಇಲ್ಲಿನ ಅರ್ಕೇಶ್ವರ ದೇವಸ್ಥಾನದಲ್ಲಿ ನಿನ್ನೆ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣ ನಡೆದಿದ್ದ ಹಿನ್ನೆಲೆ ಇಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಸ್ಥಾನ ವೀಕ್ಷಿಸಿದ ಅವರು ಘಟನೆಗೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಪರಶುರಾಮ್ ಅವರ ಬಳಿ ಮಾಹಿತಿ ಕಲೆ ಹಾಕಿದರು. ಕೊಲೆ ಮಾಡಿದವರನ್ನು ಶೀಘ್ರ ಪತ್ತೆ ಹಚ್ಚುವಂತೆ ಸೂಚಿಸಿದರು.
ಬಳಿಕ ಮಾತನಾಡಿದ ಅವರು, “ನಿನ್ನೆ ಮಂಡ್ಯದ ದೇವಸ್ಥಾನದಲ್ಲಿ ನಡೆದ ಈ ಬರ್ಬರ ಹತ್ಯೆ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು. ಮುಜರಾಯಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಲು ಮುಜರಾಯಿ ಇಲಾಖೆಯ ಆಯುಕ್ತರಿಗೆ ತಿಳಿಸಿದ್ದೇನೆ. ಇನ್ನು ಮುಂದೆ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಪ್ರತಿ ತಿಂಗಳು ಹುಂಡಿ ತೆಗೆಯಬೇಕು” ಎಂದು ಆದೇಶಿಸಿದರು.


ನಿನ್ನೆ ಕೊಲೆಯಾದ ಮೂವರು ಅರ್ಚಕರ ಕುಟುಂಬಕ್ಕೆ ಸಾಂತ್ವನ ಹೇಳಿ, ತಲಾ ಐದು ಲಕ್ಷ ರೂಪಾಯಿ ಚೆಕ್ ವಿತರಣೆ ಮಾಡಿದರು. ಸಚಿವ ನಾರಾಯಣಗೌಡ ಹಾಗೂ ಮುಜರಾಯಿ ಆಯುಕ್ತೆ ರೋಹಿಣಿ ಸಿಂಧೂರಿ ಜೊತೆಗಿದ್ದರು.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...