Saturday, April 13, 2024

ಕೆ.ಪಿ.ಸಿ.ಸಿ. ವಕ್ತಾರರಾಗಿ ಶಾಸಕ ಖಾದರ್ ನೇಮಕ

ಬೆಂಗಳುರು: ದ.ಕ. ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವ, ಮಂಗಳೂರು ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

ಈಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ನೀಡಿದ್ದು, ಮಾಧ್ಯಮಗಳಲ್ಲಿ ಪಕ್ಷದ ವಿಚಾರಗಳು ಹಾಗೂ ದೃಷ್ಥಿಕೋನಗಳು ಪರಿಣಾಮಕಾರಿಯಾಗಿ ಬಿಂಬಿತಗೊಳ್ಳಬೇಕು. ಇದಕ್ಕೆ ಉತ್ತಮ ತಿಳುವಳಿಕೆ ಹಾಗೂ ಅನುಭವದ ಅಗತ್ಯವಿದ್ದು, ಯು.ಟಿ. ಖಾದರ್ ಇದನ್ನು ಹೊಂದಿದ್ದಾರೆ. ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮಾರ್ಥ್ಯ ಹೊಂದಿರುವ ಕಾರಣದಿಂದಾಗಿ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕಗೊಳಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಪತ್ರಮುಖೇನ ತಿಳಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ ಹಾಗೂ ರಾಜ್ಯ, ರಾಷ್ಟ್ರ ಮಟ್ಟದಲ್ಲಿನ ವಿಷಯಗಳ ಬಗ್ಗೆ ಮಾಹಿತಿಯನ್ನು ಹೊಂದಿದ್ದು, ತಕ್ಷಣಕ್ಕೆ ಸ್ಪಂದಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

More from the blog

ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಮತ್ತು ಯುವ ಸ್ಪಂದನ ಸಮಾಲೋಚನೆ ಸೇವೆಗಳ ಕುರಿತು ಕಾರ್ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಕಾಮಾಜೆ ಇಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಕೇಂದ್ರ ಎಪಿಡಿಮಿಯೋಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಬೆಂಗಳೂರು,...

ನಾಳೆ ಮಂಗಳೂರಿಗೆ ಪ್ರಧಾನಿ ಮೋದಿ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿರವರು ಏಪ್ರಿಲ್ 14 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಗಳ ಭದ್ರತೆಯ ದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆಗೆ...

ಯುವಮೋರ್ಚಾ ಬಂಟ್ವಾಳ ವತಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಿ. ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಯುವಮೋರ್ಚಾ ಬಂಟ್ವಾಳ ವತಿಯಿಂದ ನರೇಂದ್ರ ಮೋದಿ ಮತೊಮ್ಮೆ ಪ್ರಧಾನಿಯಾಗಲೆಂದು ರಕ್ತೇಶ್ವರಿ ದೇವಸ್ಥಾನ ಬಿ. ಸಿ ರೋಡಿನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...