Tuesday, April 16, 2024

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್‍.ಟಿ.ಸಿ. ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 7ರಿಂದ ಆರಂಭವಾಗಲಿದೆ. ಪರೀಕ್ಷೆಗೆ ಹಾಜರಾಗುವಂತ ವಿದ್ಯಾರ್ಥಿಗಳಿಗೆ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ತಮ್ಮ ವಾಸಸ್ಥಳದಿಂದ ಉಚಿತವಾಗಿ ಹೋಗಿ ಬರಲು ಅವಕಾಶ ನೀಡಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಸೆ. 7 ರಿಂದ ಸೆ. 19 ರವರಗೆ ನಡೆಯಲಿದೆ. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆ.ಎಸ್.ಆರ್.ಟಿ.ಸಿ. ನಿಗಮವು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದೆ. ವಿದ್ಯಾರ್ಥಿ ವರ್ಗದವರು ಈ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದೆ.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...