Wednesday, April 10, 2024

ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎಲ್ಲಾ ಸೇವೆಗಳು ಪುನರಾರಂಭ

ಬಂಟ್ವಾಳ : ಕರಾವಳಿಯ ಪ್ರಸಿದ್ಧ ನಾಗಾರಾಧನೆ ಕ್ಷೇತ್ರ, ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಎಲ್ಲಾ ಸೇವೆಗಳು ಪುನರಾರಂಭಗೊಳ್ಳಲಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಎಂ.ಜೆ. ರೂಪಾ ತಿಳಿಸಿದ್ದಾರೆ.
ಕೊರೋನಾ ಲಾಕ್ ಡೌನ್ ಕಾರಣದಿಂದ ಕ್ಷೇತ್ರದಲ್ಲಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಭಕ್ತರ ಪ್ರವೇಶಕ್ಕು ಕೂಡಾ ನಿರ್ಬಂಧ ವಿಧಿಸಲಾಗಿತ್ತು. ಇದೀಗ ಲಾಕ್ ಡೌನ್ ಸಡಿಲಿಕೆಗೊಂಡಿದ್ದು, ಮುಜರಾಯಿ ಇಲಾಖೆಯ ಆದೇಶದಂತೆ ಸೂಕ್ತ ಮುಂಜಾಗೃತಾ ಕ್ರಮದೊಂದಿಗೆ, ನಿಗಧಿತ ಭಕ್ತರೊಂದಿಗೆ ಸೇವೆಗಳ ಪುನರಾರಂಭಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸರ್ಪ ಸಂಸ್ಕಾರ, ಅಶ್ಲೇಷ ಬಲಿ ಸೇರಿದಂತೆ ಇತರ ಪ್ರಮುಖ ಸೇವೆಗಳು ಶ್ರೀ ಕುಕ್ಕೆ ಕ್ಷೇತ್ರದಲ್ಲಿ ಇಂದಿನಿಂದ ಪುನರಾರಂಭಗೊಳ್ಳಲಿದ್ದು, ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಭಕ್ತರು ಶ್ರೀ ದೇವರ ದರ್ಶನ ಪಡೆಯುವುದರ ಜೊತೆಗೆ ಪ್ರಮುಖ ಸೇವೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ.
ಪ್ರಮುಖ ಷರತ್ತುಗಳು:
ಪ್ರತಿದಿನ ಮೂವತ್ತು ಭಕ್ತರಿಗೆ ಸರ್ಪ ಸಂಸ್ಕಾರಕ್ಕೆ ಅವಕಾಶ
ಸರ್ಪ ಸಂಸ್ಕಾರ, ಅಶ್ಲೇಷ ಬಲಿ ಸೇವೆಯಲ್ಲಿ ಒಮ್ಮೆ ಇಬ್ಬರಿಗೆ ಮಾತ್ರ ಅವಕಾಶ
ಮಹಾಪೂಜೆ, ಪಂಚಾಮೃತ ಸೇವೆಯ ಹತ್ತು ಟಿಕೆಟ್ ಮಾತ್ರ ವಿತರಣೆ
ಸರ್ಪ ಸಂಸ್ಕಾರ ಸೇವೆ ಸಲ್ಲಿಸುವವರಿಗೆ 2 ದಿನ ಕ್ಷೇತ್ರದ ವಸತಿ ಗೃಹದಲ್ಲಿ ತಂಗಲು ಅವಕಾಶ
ಇತರ ಸೇವೆ ನೀಡುವವರಿಗೆ ಒಂದೇ ದಿನ ತಂಗಲು ಅವಕಾಶ
ಬೆಳಿಗ್ಗೆ 6.30ರಿಂದ ಮಧ್ಯಾಹ್ನ 1.30ರ ತನಕ ಹಾಗೂ
ಮಧ್ಯಾಹ್ನದ ಬಳಿಕ 3.30ರಿಂದ 8 ಗಂಟೆ ತನಕ ಕ್ಷೇತ್ರ ತೆರೆದಿರುತ್ತದೆ ಎಂಬ ಮಾಹಿತಿ ಇದೆ.

More from the blog

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...