Thursday, April 18, 2024

ಬಂಟ್ವಾಳ ಬಡ್ಡಕಟ್ಟೆಯಲ್ಲಿ ನಗದು ಇದ್ದ ಪರ್ಸ್ ಸಿಕ್ಕಿದ್ದರೆ ಹಿಂತಿರುಗಿಸುವಂತೆ ಮನವಿ

ಬಂಟ್ವಾಳ: ವಿಟ್ಲ ನಿವಾಸಿಯೊಬ್ಬರು ಸೆ. 19ರಂದು ರಾತ್ರಿ 8.30ರ ವೇಳೆಗೆ ಉಜಿರೆಗೆ ತೆರಳುವ ವೇಳೆ ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿ ಸುಮಾರು 40 ಸಾವಿರ ರೂ.ನಗದು ಹೊಂದಿದ್ದ ಪರ್ಸ್ ಕಳೆದುಕೊಂಡಿದ್ದು, ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಿಟ್ಲ ಬೊಬ್ಬೆಕೇರಿ ನಿವಾಸಿ ಪ್ರಶಾಂತ್ ಪರ್ಸ್ ಕಳೆದುಕೊಂಡವರು. ಯಾರಾದರೂ ಪರ್ಸ್ ಸಿಕ್ಕಿದವರು ತನಗೆ ಮರಳಿಸುವಂತೆ ಮನವಿ ಮಾಡಿದ್ದು, ಸೂಕ್ತ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ. ಪರ್ಸ್ ಸಿಕ್ಕಿದವರು ಅವರ ಮೊಬೈಲ್ ಸಂಖ್ಯೆ 9845400860 ಅಥವಾ  7892765812 ಗೆ ಕರೆ ಮಾಡುವಂತೆ ವಿನಂತಿಸಿದ್ದಾರೆ.
ಕಾರಿನಲ್ಲಿ ತೆರಳುತ್ತಿದ್ದ ಅವರು ಕಾರನ್ನು ಬಡ್ಡಕಟ್ಟೆಯಲ್ಲಿ ನಿಲ್ಲಿಸಿ ಅಂಗಡಿಗಳಲ್ಲಿ ಅಗತ್ಯ ಸಾಮಾನ್ಯಗಳನ್ನು ಖರೀದಿಸಿ ಬಳಿಕ ಪರ್ಸನ್ನು ಕಿಸೆಯಲ್ಲಿ ಇಟ್ಟಿದ್ದೇನೆ. ಕಾರಿನಲ್ಲಿ ಸ್ವಲ್ಪ ಮುಂದಕ್ಕೆ ತೆರಳಿದಾಗ ಪರ್ಸ್ ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ. ತತ್‌ಕ್ಷಣ ಹಿಂದೆ ಬಂದು ನೋಡಿ ಹುಡುಕಾಡಿದರೂ ಪರ್ಸ್ ಪತ್ತೆಯಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...