Wednesday, April 17, 2024

ಕುಂಟಿಕಾನ ವಸತಿ ಸಮುಚ್ಛಯದ ತಡೆಗೋಡೆ ಕುಸಿತ

ಮಂಗಳೂರು : ವಸತಿ ಸಮುಚ್ಛಯವೊಂದರ ತಡೆಗೋಡೆ ಕುಸಿದು ಬಿದ್ದ ಘಟನೆ ನಗರದ ಕುಂಟಿಕಾನದಲ್ಲಿ ನಡೆದಿದೆ. ಇದರ ಪರಿಣಾಮದಿಂದಾಗಿ ಮಣ್ಣಿನಡಿ ಸುಮಾರು 10 ಕ್ಕೂ ಅಧಿಕ ಕಾರುಗಳು ಹೂತು ಹೋಗಿರುವ ಬಗ್ಗೆ ಶಂಕಿಸಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶುಕ್ರವಾರ ಬೆಳಿಗ್ಗೆ ತಡೆಗೋಡೆಯ ಒಂದು ಭಾಗದ ಗೋಡೆ ಕುಸಿದು ಹಿಂಬದಿಯ ಹಾಸ್ಟೆಲ್‌ ಆವರಣದೊಳಗೆ ಮಣ್ಣು ರಾಶಿ ಬಿತ್ತು. ಇದೀಗ ಮತ್ತೊಂದು ಭಾಗದ ಗೋಡೆಯು ಕೂಡಾ ಕುಸಿಯುವ ಆತಂಕ ಸೃಷ್ಟಿಯಾಗಿದ್ದು, ಈ ಹಿನ್ನೆಲೆ ಇನ್ನೂ ಕೂಡಾ ಕಾರ್ಯಾಚರಣೆ ಆರಂಭವಾಗಿಲ್ಲ ಎಂಬ ಮಾಹಿತಿ ಇದೆ.


ಅಗ್ನಿ ಶಾಮಕ ದಳ, ಸ್ಥಳೀಯ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದು ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅವರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

More from the blog

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಬಂಟ್ವಾಳದ ಹಿಂದೂ ಯುವ ಸೇನಾ ಮುಖಂಡನಿಗೆ ಚೂರಿ ಇರಿದ ದುಷ್ಕರ್ಮಿಯನ್ನು ಶೀಘ್ರ ಬಂದಿಸಿ, ಕಠಿನ ಶಿಕ್ಷೆ ವಿಧಿಸುವಂತೆ ಹಿಂದೂ ಯುವ ಸೇನೆ ಆಗ್ರಹ

ಬಂಟ್ವಾಳ: ಹಿಂದೂ ಯುವ ಸೇನೆ ಬಂಟ್ವಾಳ ತಾಲೂಕು ಘಟಕದ ಮಾಜಿ ಅಧ್ಯಕ್ಷ ಪುಷ್ಪರಾಜ್ ರವರು ದುಷ್ಕರ್ಮಿಯಿಂದ ಚೂರಿ ಇರಿತಕ್ಕೊಳಗಾಗಿರುವುದನ್ನು ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ, ಬಂಟ್ವಾಳ ತಾಲೂಕು ಘಟಕ ಖಂಡಿಸುತ್ತದೆ. ಅಮಾಯಕ ಪುಷ್ಪರಾಜ್...

ಪ್ರಧಾನಿ ಮೋದಿಯವರೇ.. ದಕ್ಷಿಣ ಕನ್ನಡಕ್ಕೆ ನೀವು ಕೊಟ್ಟದ್ದೆಷ್ಟು- ಸಿಎಂ ಪ್ರಶ್ನೆ

ಬೆಂಗಳೂರು: “ನನ್ನ ತೆರಿಗೆ ನನ್ನ ಹಕ್ಕು" ಅಭಿಯಾನದ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಚುನಾವಣ ರ್‍ಯಾಲಿ ನಡೆಸಿದ ದಕ್ಷಿಣ ಕನ್ನಡಕ್ಕೆ ತಮ್ಮ ಕೊಡುಗೆಯ ಲೆಕ್ಕ ಕೊಡುವಂತೆ ಕಾಂಗ್ರೆಸ್‌ ಕೇಳಿದೆ. ಪ್ರಧಾನಿ ನರೇಂದ್ರ ಮೋದಿ...