Thursday, April 11, 2024

ಮಂಗಳೂರು: ಭಾರೀ ಮಳೆಗೆ ಕೊಂಚಾಡಿಯ ಫ್ಲಾಟ್ ಹಿಂಭಾಗದ ಧರೆ ಕುಸಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ ಭಾಗದ ಜನರ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳ ಮನೆಗಳು ಜಲಾವೃತವಾಗಿವೆ.
ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರಿನ ಕೊಂಚಾಡಿಯಲ್ಲಿ 12 ಅಂತಸ್ತಿನ ಎಸೆಲ್ ಹೈಟ್ಸ್ ಫ್ಲ್ಯಾಟ್ ಹಿಂಭಾಗದಲ್ಲಿ ಧರೆ ಕುಸಿದಿದೆ. ಧರೆ ಕುಸಿದು ಹಲವು ವಾಹನಗಳು ಜಖಂ ಆಗಿವೆ. ಮುಂಜಾಗ್ರತಾ ಕ್ರಮವಾಗಿ ಫ್ಲ್ಯಾಟ್​ನಲ್ಲಿದ್ದ ನೂರಾರು ಮಂದಿ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಫ್ಲಾಟ್ ಮುಂಭಾಗದ ರಸ್ತೆ ಬಂದ್ ಮಾಡಲಾಗಿದ್ದು, ಸ್ಥಳಕ್ಕೆ ಎಸ್.ಡಿ.ಆರ್‍.ಎಫ್., ಎನ್.ಡಿ.ಆರ್‍.ಎಫ್. ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
ನಿನ್ನೆ ರಾತ್ರಿಯಿಂದ ಸುರಿದ ಮಳೆಗೆ ಮಂಗಳೂರು ಹೊರವಲಯದ ಜಪ್ಪಿನಮೊಗರು ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿದೆ. ಅಲ್ಲಿನ 50ಕ್ಕೂ ಹೆಚ್ಚು ಮನೆಗಳು ಮುಳುಗಡೆಯಾಗಿವೆ. ನೀರಿನ ಮಟ್ಟ ಹೆಚ್ಚಾಗುತ್ತಿದ್ದಂತೆ ಅಗ್ನಿಶಾಮಕ ದಳ, ಹೋಮ್ ಗಾರ್ಡ್, ಪೊಲೀಸ್ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮನೆಯಲ್ಲಿನ ಮಕ್ಕಳು, ವೃದ್ಧರು, ಅನಾರೋಗ್ಯ ಪೀಡಿತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು. ಮಳೆ ಹೆಚ್ಚಿರುವುದರಿಂದ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...