


ಬಂಟ್ವಾಳ: ಕೊರೊನಾ ಸಮಸ್ಯೆಯಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಸಕಾಲದಲ್ಲಿ ನಡೆಯದೆ ಸಾಕಷ್ಟು ತೊಂದರೆಯಾಗಿತ್ತು.
ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಗಳ ಅಭಿವೃದ್ಧಿ ಕಾಮಗಾರಿಗಳು ಕೊರೊನಾ ಸಮಸ್ಯೆ ಯಿಂದ ತುಂಡು ಗುತ್ತಿಗೆ ಮಾಡಲಾಗದೇ ಉಳಿದಿತ್ತು.
ತುಂಡು ಗುತ್ತಿಗೆ ಅವಧಿ ಮಿರಿರುವುದರಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸರ್ಕಾರದ ಮಟ್ಟದಲ್ಲಿ ಇತರ ಸಚಿವರು, ಅಧಿಕಾರಿಗಳಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತುಕತೆ ನಡೆಸಿದ ಬಳಿಕ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯಿಂದ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಕೈ ಗೊಳ್ಳುವ ಸಿವಿಲ್ ಕಾಮಗಾರಿಗಳಿ ಸಂಬಂಧಿಸಿದಂತೆ ರೂ.5 ಲಕ್ಷ ವರೆಗಿನ ಕಾಮಗಾರಿಗಳನ್ನು ನೋಂದಾಯಿತ ಗುತ್ತಿಗೆದಾರರಿಂದ ತುಂಡು ಗುತ್ತಿಗೆ ಮೂಲಕ ಅನುಷ್ಠಾನ ಮಾಡುವ ಬಗ್ಗೆ ಸರ್ಕಾರದ ಅದೇಶ ಹೊರಡಿಸಿದೆ.
ಈ ಆದೇಶ ಹೊರಡಿಸುವಲ್ಲಿ ಮುಂಚೂಣಿಯ ಪಾತ್ರ ವಹಿಸಿರುವ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಯವರಿಗೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಪರವಾಗಿ ತಾ.ಪಂ. ಸದಸ್ಯ ಪ್ರಭಾಕರ ಪ್ರಭು ಅಭಿನಂದನೆ ಸಲ್ಲಿಸಿದ್ದಾರೆ.


