Sunday, April 14, 2024

ಸಂಗಬೆಟ್ಟು ಜಿ.ಪಂ. ಕ್ಷೇತ್ರಕ್ಕೆ 100 ಕೋಟಿಗೂ ಮಿಕ್ಕಿದ ಅನುದಾನ : ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

ಬಂಟ್ವಾಳ: ಸಂಗಬೆಟ್ಟು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 100 ಕೋಟಿಗೂ ಮಿಕ್ಕಿದ ಅನುದಾನ ಬಿಡುಗಡೆಯಾಗಿದ್ದು, ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಸಂಗಬೆಟ್ಟು ಜಿ.ಪಂ.ಕ್ಷೇತ್ರ ವ್ಯಾಪ್ತಿಯಲ್ಲಿ 20 ಕೋಟಿ ರೂ. ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಕೊರೊನಾ ಮಾಹಾಮಾರಿಯ ನಡುವೆಯೂ ರಾಜ್ಯ ಸರಕಾರ ಅಭಿವೃದ್ಧಿ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದು ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ “ರಾಜ್ಯ ರಸ್ತೆ ನಿಧಿಯ” ಮೂಲಕ ಸುಮಾರು 13 ಕೋಟಿ ರೂ. ಅನುದಾನದಲ್ಲಿ ಬಂಟ್ವಾಳ-ಮೂಡಬಿದ್ರಿ ಲೋಕೋಪಯೋಗಿ ರಸ್ತೆಯ ಸೊರ್ನಾಡ್ ನಿಂದ ಪುಚ್ಚಮೊಗರು ತನಕ ರಸ್ತೆ ಅಗಲೀಕರಣ ಕಾಮಗಾರಿಗೆ ಇಂದು (ಸೆ.7) ಬೆಳಿಗ್ಗೆ ಸಿದ್ದಕಟ್ಟೆಯಲ್ಲಿ ಗುದ್ದಲಿ ಪೂಜೆ ನಡೆಯಿತು.

ಸಿದ್ದಕಟ್ಟೆಯಿಂದ ಹೊಕ್ಕಾಡಿಗೋಳಿ ರಸ್ತೆ ಮರುಡಾಮರೀಕರಣಕ್ಕೆ 50 ಲಕ್ಷ, ಬಂಡಸಾಲೆಯಿಂದ-ಎಣಿಲಕೋಡಿ-ಪಂಜಿಕಲ್ಲುಪದವು-ಆಚಾರಿಪಲ್ಕೆ ರಸ್ತೆಗೆ 3 ಕೋಟಿ ರೂ. ಅನುದಾನದಲ್ಲಿ ರಸ್ತೆ ಡಾಮರೀಕರಣ, 2.0 ಕೋಟಿ ರೂ. ವೆಚ್ಚದಲ್ಲಿ ಎಲಿಯನಾಡು ಗ್ರಾಮದ ಕೊನೆರೊಟ್ಟು ಮಾವಿನಕಟ್ಟೆ ರಸ್ತೆಗೆ ಶಿಲಾನ್ಯಾಸ, 35 ಲಕ್ಷ ರೂ ವೆಚ್ಚದಲ್ಲಿ ಆಚಾರಿಪಲ್ಕೆ ಶಾಲಾ ಕೊಠಡಿ ನಿರ್ಮಾಣಕ್ಕೆ ಶಿಲಾನ್ಯಾಸ, 5 ಲಕ್ಷ ರಸ್ತೆ ರೂ. ವೆಚ್ಚದಲ್ಲಿ ನಿಂಗಲ್ ಬಾಕಿಮಾರು ರಸ್ತೆ ಕಾಮಗಾರಿ ಉದ್ಘಾಟನೆ, 3.50 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ನೆಲ್ಲಿಗುಡ್ಡೆ ರಸ್ತೆ ಉದ್ಘಾಟನೆ, 40.0 ಲಕ್ಷ ರೂ ವೆಚ್ಚದಲ್ಲಿ ಕುಜಿಲಬೆಟ್ಟು ಕಾಲೊನಿ ರಸ್ತೆಗೆ ಶಿಲಾನ್ಯಾಸ, 15.00 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಕೈಲಾರು ರಸ್ತೆ ಉದ್ಘಾಟನೆ, 60 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಕುಜಿಲಬೆಟ್ಟು ರಸ್ತೆ ಉದ್ಘಾಟನೆ, 5.00 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ
ಕೇದಗೆ ರಸ್ತೆ ವೆಚ್ಚದಲ್ಲಿ ನಿರ್ಮಾಣವಾದ ರಸ್ತೆಗಳ ಉದ್ಘಾಟನೆ ನಡೆಯಿತು.
ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿ‌.ಪಂ.ಸದಸ್ಯ ತುಂಗಪ್ಪ ಬಂಗೇರ, ತಾ.ಪಂ. ಸದಸ್ಯ ಪ್ರಭಾಕರ್ ಪ್ರಭು, ಪ್ರಮುಖರಾದ ರತ್ನಕುಮಾರ್ ಚೌಟ, ಸತೀಶ್ ಪೂಜಾರಿ, ಸಂದೇಶ್ ಶೆಟ್ಟಿ, ಮಂದಾರತಿ ಶೆಟ್ಟಿ, ರಶ್ಮಿತ್ ಶೆಟ್ಟಿ ಕೈತ್ರೋಡಿ, ಪುರುಷೋತ್ತಮ ಶೆಟ್ಟಿ, ದಿನೇಶ್ ಶೆಟ್ಟಿ ದಂಬೆದಾರ್, ಸಂಜೀವ ಪೂಜಾರಿ, ಪ್ರಕಾಶ್ ಅಂಚನ್, ಕರುಣೇಂದ್ರ ಪೂಜಾರಿ, ಲಕ್ಮೀನಾರಾಯಣ ಗೌಡ, ಚಿದಾನಂದ ಕುಲಾಲ್, ಆನಂದ ಕೋಟ್ಯಾನ್, ರಮಾನಥ ರಾಯಿ, ನಂದರಾ ಮರೈ, ಯಶೋಧರ ಕರ್ಬೆಟ್ಟು, ವಸಂತ ಕುಮಾರ್ ಅಣ್ಣಳಿಕೆ, ಸಂತೋಷ ರಾಯಿಬೆಟ್ಟು, ಸೀತರಾಮ ಪೂಜಾರಿ, ಡೊಂಬಯ ಅರಳ, ಗಣೇಶ್ ರೈ ಮಾಣಿ ಮತ್ತಿರರು ಉಪಸ್ಥಿತರಿದ್ದರು.

More from the blog

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಪ್ರಧಾನಿ ಮೋದಿ ರೋಡ್ ಶೋಗೆ ಸಿದ್ಧತೆ : ರಸ್ತೆಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಮಂಗಳೂರು: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ ಶೋ ಇರುವ ಹಿನ್ನೆಲೆಯಲ್ಲಿ ಭಾರೀ ಪೊಲೀಸ್‌ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶನಿವಾರ ಸಂಜೆಯಿಂದಲೇ ಪೊಲೀಸರು ಕಾರ್ಯ ನಿರತರಾಗಿದ್ದು, ಹೊಸದಿಲ್ಲಿಯಿಂದ ಆಗಮಿಸಿರುವ ಎಸ್‌ಪಿಜಿ ಅಧಿಕಾರಿಗಳು ರೋಡ್‌ ಶೋ...

ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ ಪ್ಲಾಸ್ಟಿಕ್ ಪತ್ತೆ….! ತ್ಯಾಜ್ಯ ಜೀರ್ಣವಾಗದೆ ಮೊಸಳೆ ಸಾವು

ಸುಬ್ರಹ್ಮಣ್ಯ: ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್‌ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು...