Wednesday, April 10, 2024

ಪೊಳಲಿ ದ್ವಾರದ ಬಳಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ನಿಲ್ದಾಣ ಲೋಕರ್ಪಣೆ

ಬಂಟ್ವಾಳ: ಬಿ.ಸಿ.ರೋಡ್ – ಕೈಕಂಬದ ಪೊಳಲಿ ದ್ವಾರದ ಬಳಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ನಿಲ್ದಾಣವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಯವರು ಲೋಕರ್ಪಣೆಗೊಳಿಸಿದರು.

ನಂತರ ಮಾತನಾಡಿದ ಶಾಸಕರು, ರಿಕ್ಷಾ ಚಾಲಕರು ಸೇವಾ ಮನೋಭಾವದಿಂದ ದುಡಿಯುತ್ತಿದ್ದು, ತಮ್ಮ ನಿತ್ಯ ದುಡಿಮೆಯ ಜೊತೆ ವೈದ್ಯಕೀಯ ತುರ್ತು ಪರಿಸ್ಥಿತಿಯಲ್ಲಿ ಯಾವುದೇ ಸಮಯದಲ್ಲಿ ಜನಸಾಮಾನ್ಯರಿಗೆ ಸ್ಪಂದಿಸುವ ಮೂಲಕ ವಿಶ್ವಾಸ ಅರ್ಹರಾಗಿರುತ್ತಾರೆ. ಈ ಭಾಗದ ರಿಕ್ಷಾ ಚಾಲಕರು ಬಹುದಿನಗಳ ಬೇಡಿಕೆಯನ್ನು ಇಂದು ಈಡೇರಿಸಿದ್ದು, ಮುಂದಿನ ದಿನಗಳಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಲ್ಲಾ ರಿಕ್ಷಾ ನಿಲ್ದಾಣಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.

ಈ ಸಂಧರ್ಭದಲ್ಲಿ ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಪ್ರಮುಖರಾದ ರಮನಾಥ ರಾಯಿ, ಪ್ರಕಾಶ್ ಅಂಚನ್, ಗಣೇಶ್ ದಾಸ್,ಮಹಾಬಲ ಶೆಟ್ಟಿ, ಸಂಜೀವ ಪೂಜಾರಿ ಪಿಲಿಂಗಾಲು, ಸೀತಾರಾಮ ಪೂಜಾರಿ, ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಸುದರ್ಶನ್ ಬಜ, ಅಭಿಯಂತರರಾದ ಡೊಮಿನಿಕ್ ಡಿಮೇಲ್ಲೋ, ಅಶ್ವಥ ರಾವ್ ಬಾಳಿಕೆ, ಪ್ರಮೋದ್ ನೂಜಿಪ್ಪಾಡಿ, ರಿಕ್ಷಾ ಚಾಲಕರ ಅಧ್ಯಕ್ಷ ಚಿತ್ತರಂಜನ್ ಪೂಜಾರಿ, ಕಾರ್ಯದರ್ಶಿ ಇಸ್ಮಾಯಿಲ್, ಗುತ್ತಿಗೆದಾರ ಕಾರ್ತಿಕ್ ಬಲ್ಲಾಳ್, ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.

More from the blog

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...