Friday, April 5, 2024

ನೂತನ ಶಿಕ್ಷಣ ನೀತಿಯಲ್ಲಿ ಭಾರತದ ಭಾಷೆಗಳು, ಕಲೆ, ಸಂಸ್ಕೃತಿಗೆ ಆದ್ಯತೆ ನೀಡಲಾಗಿದೆ : ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಯಶಸ್ವಿ ಜಾರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಿಣಾಮಕಾರಿ ಕೊಡುಗೆಯನ್ನು ಅವಲಂಬಿಸಿದೆ. ಭಾರತದ ಸಂವಿಧಾನದೊಳಗೆ ಶಿಕ್ಷಣ ಒಂದು ಪ್ರಬಲವಾದ ಅಸ್ತ್ರವಾಗಿದೆ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಒಟ್ಟಾಗಿ ಇವುಗಳನ್ನು ಯಶಸ್ವಿಯಾಗಿ ಜಾರಿಗೆ ತರಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿಳಿಸಿದ್ದಾರೆ. ಅವರು ಇಂದು ವರ್ಚುವಲ್ ಕಾನ್ಫರೆನ್ಸ್ ಮೂಲಕ ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಉದ್ದೇಶಿಸಿ ಮಾತನಾಡಿದರು.
ಎಲ್ಲಾ ಕ್ಷೇತ್ರಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ರಾಷ್ಟ್ರೀಯ ಸಂಶೋಧನಾ ಫೌಂಡೇಶನ್ ನ್ನು ಸ್ಥಾಪಿಸಲಾಗುವುದು. ಸಂಶೋಧನೆಯ ಸಂಸ್ಕೃತಿಯನ್ನು ಹೆಚ್ಚಿಸಲು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ರಾಷ್ಟ್ರೀಯ ಸಂಶೋಧನಾ ಕೇಂದ್ರದ ಮೂಲಕ ಕೆಲಸ ಮಾಡಬೇಕು ಎಂದರು. ನೂತನ ಶಿಕ್ಷಣ ನೀತಿಯಲ್ಲಿ ಭಾರತದ ಭಾಷೆಗಳು, ಕಲೆ, ಸಂಸ್ಕೃತಿಗೆ ಆದ್ಯತೆ ನೀಡಲಾಗಿದೆ. ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಭಾರತದ ಭಾಷೆಗಳು ಮತ್ತು ಸಮಗ್ರತೆ, ಐಕ್ಯತೆಯನ್ನು ಬಲಪಡಿಸುತ್ತದೆ. ತಂತ್ರಜ್ಞಾನಗಳ ಸಮಗ್ರತೆಯನ್ನು ಬಳಸುವ ಮೂಲಕ ಕಲಿಕೆಯ ಪ್ರಕ್ರಿಯೆ ಉತ್ತಮವಾಗಿ ವಿದ್ಯಾರ್ಥಿಗಳ ಭವಿಷ್ಯ ಪ್ರಜ್ವಲವಾಗುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ತಂತ್ರಜ್ಞಾನ ವೇದಿಕೆಯನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...