Monday, April 8, 2024

ಪೆರಾಜೆ ಶಾಲಾ ರಂಗಮಂದಿರದಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬಂಟ್ವಾಳ: ಪೆರಾಜೆ ಯುವಕ ಮಂಡಲ (ರಿ) ಪೆರಾಜೆ, ಸೈಲೆಂಟ್ ಫ್ರೆಂಡ್ಸ್ ಬುಡೋಳಿ ಹಾಗೂ ಎನ್ಎಸ್ಯುಐ ಘಟಕ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಪೆರಾಜೆ ಶಾಲಾ ರಂಗಮಂದಿರದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೆರಾಜೆ ಗುತ್ತು ಶ್ರೀಕಾಂತ ಆಳ್ವಾ ರವರು ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬುಡೋಳಿಗುತ್ತು ಚಂದ್ರಹಾಸ ಶೆಟ್ಟಿ, ಬುಡೋಳಿ ಅಪ್ರಾಯ ಫೈ,  ಶಾಂತಪ್ಪ ಕುಲಾಲ್, ಕುಲಾಲ ತಾಲೂಕ್ ಪಂಚಾಯತ್ ಸದಸ್ಯೆ ಮಂಜುಳ ಕುಶಾಲ ಪೆರಾಜೆ ಸಂಜೀವ ಸಾಧಿಕುಕ್ಕು, ಮಾಜಿ ತಾಲೂಕು ಪಂಚಾಯತ್ ಸದಸ್ಯ ಕುಶಾಲ ಎಂ. ಪೆರಾಜೆ, ಎನ್ಎಸ್ಯುಐ ಘಟಕ ಬಂಟ್ವಾಳ ಇದರ ಕಾರ್ಯಕರ್ತರಾದ ಫಾರೂಕ್ ಬಾಯಬ್ಬೆ ಮತ್ತು ಬಾತಿಶ್ ಅಳಕೆಮಜಲು ಇವರು ಉಪಸ್ಥಿತರಿದ್ದರು.
ಪ್ರತಿಭಾ ಪುರಸ್ಕಾರದ ಅಂಗವಾಗಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಪಾಸಾದ ಪೆರಾಜೆ ಗ್ರಾಮದ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಸನ್ಮಾನಿಸಲಾಯಿತು. ನವೋದಯ ಶಾಲೆಗೆ ಆಯ್ಕೆಗೊಂಡ ಚಿನ್ಮಯಿ ಮಂಜೋಟಿ ಇವನನ್ನು ಗುರುತಿಸಿ ಗೌರವಿಸಲಾಯಿತು.

ಯುವಕ ಮಂಡಲ ಮತ್ತು ಸೈಲೆಂಟ್ ಫ್ರೆಂಡ್ಸ್ ಬುಡೋಳಿ ಬಳಗದ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಯುವಕ ಮಂಡಲದ ಅಧ್ಯಕ್ಷ ದೀಪಕ್ ಸುವರ್ಣ ಪೆರಾಜೆ ಸ್ವಾಗತಿಸಿದರು. ಯುವಕ ಮಂಡಲದ ಕಾರ್ಯದರ್ಶಿ ಸಚಿನ್ ಮಂಜೋಟಿ ವಂದಿಸಿದರು. ಲಕ್ಷ್ಮೀಶ ಪೆರಾಜೆ ಕಾರ್ಯಕ್ರಮವನ್ನು ನಿರ್ವಹಿಸಿದರು.

More from the blog

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...