Sunday, April 7, 2024

ಕೊರೊನಾ ಸಾವಿನ ಪ್ರಮಾಣ ರಾಜ್ಯದಲ್ಲಿ ಕಡಿಮೆಯಾಗುತ್ತಿದೆ: ಪ್ರಧಾನಿಗೆ ಮುಖ್ಯಮಂತ್ರಿಯಿಂದ ಮಾಹಿತಿ

ಬೆಂಗಳೂರು : ಕೊರೊನಾ ಸಾವಿನ ಪ್ರಮಾಣ ರಾಜ್ಯದಲ್ಲಿ ಕಡಿಮೆಯಾಗುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದಾರೆ. ನಿನ್ನೆ (ಬುಧವಾರ) ಕೊರೊನಾ ಸೋಂಕು ನಿಯಂತ್ರಣ ಕುರಿತಾಗಿ ಪ್ರಧಾನಿ ಮೋದಿಯವರು ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ನವದೆಹಲಿ, ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಒಟ್ಟು ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ವೈ. ಅವರು ರಾಜ್ಯದ ಕೊರೊನಾ ಸ್ಥಿತಿಗತಿ ಬಗ್ಗೆ ಪ್ರಧಾನ ಮಂತ್ರಿಯವರಿಗೆ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪುವವರ ಪ್ರಮಾಣ ಕಡಿಮೆಯಾಗುತ್ತಿದ್ದು, ಜುಲೈ ತಿಂಗಳಿನಲ್ಲಿ ಶೇ.2.6ರಷ್ಟಿದ್ದ ಸಾವಿನ ಪ್ರಮಾಣ ಇದೀಗ ಶೇ.1.54ಕ್ಕೆ ಇಳಿದಿದೆ. ರಾಜ್ಯದಲ್ಲಿ ಒಟ್ಟು 136 ಪರೀಕ್ಷಾ ಪ್ರಯೋಗಾಲಯಗಳಿದ್ದು, ಪ್ರತಿದಿನ 70,000 ಸ್ಯಾಂಪಲ್ಸ್‌ಗಳ ಟೆಸ್ಟ್ ನಡೆಸಲಾಗುತ್ತಿದೆ. ಈವರೆಗೆ ಸುಮಾರು 43 ಲಕ್ಷ ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ವರದಿ ಬಂದ ಬಳಿಕ ರೋಗ ಲಕ್ಷಣ ಇರುವವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿ, 24 ರಿಂದ 48 ಗಂಟೆಗಳಲ್ಲಿ ಅವರ ಸಂಪರ್ಕವನ್ನು ಗುರುತಿಸಲಾಗುತ್ತದೆ. ರೋಗಿಗಳಿಗೆ ರೆಮ್‌ಡೆಸಿವಿರ್ ಸೇರಿದಂತೆ ಇತರೆ ಔಷಧಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಒಟ್ಟು 2,000 ಆಂಬುಲೆನ್ಸ್‌ಗಳು ರಾಜ್ಯದಲ್ಲಿದೆ. ಹಾಸಿಗೆಗಳನ್ನು ಹೆಚ್ಚಿಸಲಾಗಿದೆ. ಇನ್ನೂ ಕೂಡಾ ಹೆಚ್ಚಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ಧಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...