Thursday, April 11, 2024

ಸರ್ಕಾರಿ, ಮಿಲಿಟರಿ ಗೌರವಗಳೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅಂತ್ಯಕ್ರಿಯೆ

ನವದೆಹಲಿ: ಸಕಲ ಸರ್ಕಾರಿ, ಮಿಲಿಟರಿ ಗೌರವಗಳೊಂದಿಗೆ ಮಾಜಿ ರಾಷ್ಟ್ರಪತಿ, ಭಾರತ ರತ್ನ, ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ದೆಹಲಿಯ ಲೋದಿ ರಸ್ತೆಯಲ್ಲಿರುವ ಚಿತಾಗಾರಾದಲ್ಲಿ ನಡೆಯಿತು. ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ ಅಂತ್ಯಕ್ರಿಯೆಯನ್ನು ನೆರವೇರಿಸಿದರು.

ಪಿಪಿಇ ಕಿಟ್ ಧರಿಸಿದ ಕುಟುಂಬ ಸದಸ್ಯರು, ಸಂಬಂಧಿಕರು ಅಂತಿಮ ವಿಧಿ ವಿಧಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಅಂತಿಮ ಕ್ರಿಯೆಗೂ ಮುನ್ನ ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಪ್ರಣವ್ ಅವರ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ನೀಡಲಾಗಿದ್ದು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಾರ್ವಜನಿಕರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡರು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಣಬ್‌ ಮುಖರ್ಜಿ(84) ಅವರು ಮೆದುಳು ಚಿಕಿತ್ಸೆಯ ಬಳಿಕ ಕೋಮಾಕ್ಕೆ ಜಾರಿದ್ದು, ನಿನ್ನೆ ಕೊನೆಯುಸಿರೆಳೆದಿದ್ದಾರೆ. ಚಿಕಿತ್ಸೆಗೂ ಮುನ್ನ ಕೊರೊನಾ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿತ್ತು.

More from the blog

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....