Wednesday, April 10, 2024

ಪ್ಲಾಸ್ಮಾ ದಾನ ಮಾಡುವ ಮೂಲಕ ಕೋವಿಡ್-19 ಸೋಂಕಿತನ ಜೀವ ಉಳಿಸಿದ ಜಿಲ್ಲೆಯ ಪ್ರಥಮ ಪೊಲೀಸ್

ಪುತ್ತೂರು: ಕೊರೋನಾ ಸೋಂಕಿಗೆ ಒಳಗಾಗಿ ಜೀವನ್ಮರಣ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವನಿಗೆ ಪೊಲೀಸ್‌ ಸಿಬಂದಿಯೊಬ್ಬರು ತನ್ನ ದೇಹದಿಂದ ಪ್ಲಾಸ್ಮಾ ದಾನ ಮಾಡುವ ಮೂಲಕ ಜೀವ ಉಳಿಸಿ ಮಾನವೀಯತೆ ಮೆರೆದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯ ಡಿ.ಆರ್. ವಿಭಾಗದಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ತೆಗ್ಗು ನೂಜಿ ಬರಮೇಲು ನಿವಾಸಿ ರಂಜಿತ್ ಕುಮಾರ್ ರೈ ಪ್ಲಾಸ್ಮಾ ದಾನ ಮಾಡಿದವರು.
ಬ್ರಹ್ಮಾವರ ಮೂಲದ ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಪೂರ್ಣಾನಂದ ಅವರು ಕೋವಿಡ್ 19 ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ರಕ್ತದಲ್ಲಿ ಪ್ಲಾಸ್ಮಾ ಸಂಖ್ಯೆ ಕಡಿಮೆಯಾಗಿದ್ದರಿಂದ ಜೀವನ್ಮರಣ ಹೋರಾಟದಲ್ಲಿದ್ದರು. ಈ ಮಾಹಿತಿ ಪಡೆದ ರಂಜಿತ್ ಕುಮಾರ್ ರೈ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ 0+ ಪ್ಲಾಸ್ಮಾ 450 ಎಂ.ಎಲ್. ದಾನ ಮಾಡಿದ್ದಾರೆ. ಅದಾದ ಬಳಿಕ ಪೂರ್ಣಾನಂದ ಅವರ ಆರೋಗ್ಯದಲ್ಲಿ ಪೂರ್ಣ ಚೇತರಿಕೆ ಕಂಡು ಬಂದಿದೆ ಎಂಬ ಮಾಹಿತಿ ದೊರೆತಿದೆ. ಪೊಲೀಸ್‌ ಇಲಾಖೆಗೆ ಸಂಬಂಧಪಟ್ಟಂತೆ ಪ್ಲಾಸ್ಮಾ ದಾನ ಮಾಡಿದವರಲ್ಲಿ ರಂಜಿತ್‌ ಕುಮಾರ್ ರೈ ಜಿಲ್ಲೆಯಲ್ಲಿ ಪ್ರಥಮ ಪೊಲೀಸ್ ಆಗಿದ್ದಾರೆ. ಇವರ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

More from the blog

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...