Saturday, April 6, 2024

ಬೆಂಗಳೂರು- ಮಂಗಳೂರು ರೈಲು ಸಂಚಾರ ಸೆ.4ರಿಂದ ಪುನರಾರಂಭ

ಮಂಗಳೂರು : ರೈಲ್ವೆ ಮಂಡಳಿ ನೈರುತ್ಯ ರೈಲ್ವೆ ವಿಭಾಗಕ್ಕೆ ಕರಾವಳಿ ವಿಭಾಗದಲ್ಲಿ ಮೂರು ವಿಶೇಷ ರೈಲುಗಳನ್ನು ಓಡಿಸಲು ಅನುಮತಿ ನೀಡಿದ್ದು, ಇದರಲ್ಲಿ ಕಾರವಾರ-ಯಶವಂತ ಪುರ-ಕಾರವಾರ ರೈಲು ಕಾರ್ಯಾರಂಭಿಸಲಿದೆ ಎಂದು ವರದಿಯಾಗಿದೆ.
ಸೆ. 4ರ (ಇಂದು)ಶುಕ್ರವಾರ ಸಂಜೆ 6.45ಕ್ಕೆ ನಂ.06585 ಯಶವಂತಪುರ ಹಾಗೂ ಕಾರವಾರ ನಡುವೆ ಕಾರ್ಯಾರಂಭಿಸಲಿದೆ. ಸೆಪ್ಟೆಂಬರ್‌ 5ರಂದು ಸಂಜೆ 6 ಗಂಟೆಗೆ ನಂ. 6595 ರೈಲು ಕಾರವಾರದಿಂದ ಹೊರಡಲಿದೆ. ಇನ್ನು ನಂ.16595/16596 ರೈಲುಗಳದ್ದೇ ವೇಳಾಪಟ್ಟಿ ಇವುಗಳಿಗೆ ಅನ್ವಯವಾಗಲಿದೆ.
ಬೆಂಗಳೂರು-ಮಂಗಳೂರಿನ (06515) ನಡುವೆ ವಾರದಲ್ಲಿ ನಾಲ್ಕು ದಿನಗಳ ಕಾಲ ಚಲಿಸುವ ರೈಲು ಸೆಪ್ಟೆಂಬರ್‌ 4ರಿಂದ ಕಾರ್ಯಾಚರಣೆ ಆರಂಭಿಸಲಿದೆ. ಸೆಪ್ಟೆಂಬರ್‌ 6ರಿಂದ ನಂ.06516 ರೈಲು ಕಾರ್ಯಾರಂಭಿಸಲಿದೆ. ವಾರಕ್ಕೆ ಮೂರು ಬಾರಿ ಬೆಂಗಳೂರು-ಮಂಗಳೂರು ನಡುವೆ ಚಲಿಸುವ ನಂ.06517 ರೈಲು ಸೆಪ್ಟೆಂಬರ್ 6 ರಿಂದ ಆರಂಭವಾಗಲಿದ್ದು, ಮಂಗಳೂರು-ಬೆಂಗಳೂರು ನಡುವಿನ ನಂ.06518 ರ ರೈಲು ಸೆಪ್ಟೆಂಬರ್ 5 ರಿಂದ ಕಾರ್ಯಾಚರಣೆ ಆರಂಭಿಸಲಿದೆ ಎಂಬ ಮಾಹಿತಿ ಇದೆ.
ಈ ವಿಶೇಷ ರೈಲುಗಳು ಮುಂದಿನ ಸೂಚನೆ ಬರುವವರೆಗೂ ಕಾರ್ಯನಿರ್ವಹಿಸಲಿದ್ದು, ಈ ರೈಲುಗಳಲ್ಲಿ ಪ್ರಯಾಣಿಸಲು ಮುಂಗಡ ಬುಕಿಂಗ್ ಅಗತ್ಯ.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...