Monday, April 8, 2024

ಬಿ.ಸಿ.ರೋಡ್: ಮಿನಿ ವಿಧಾನಸೌಧದಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಕೊವೀಡ್ ಟೆಸ್ಟ್

ಬಂಟ್ವಾಳ: ಕೊರೊನದಿಂದ ಸಾವಿನ ಸಂಖ್ಯೆ ಕಡಿಮೆ ಮಾಡುವ ಉದ್ದೇಶದಿಂದ ಮತ್ತು ಸಮುದಾಯಕ್ಕೆ ಹರಡುವುದನ್ನು ತಡೆಗಟ್ಟುವ ಸಲುವಾಗಿ ಪ್ರತಿಯೊಬ್ಬರೂ ಸ್ವ-ಇಚ್ಛೆಯಿಂದ ಕೊರೊನಾ ಟೆಸ್ಟ್ ಮಾಡುವುದು ಒಳಿತು ಎಂಬುದು ಸರಕಾರದ ಚಿಂತನೆಯಾಗಿದೆ.
ಈ ನಿಟ್ಟಿನಲ್ಲಿ ಕೊರೊನಾ ನಿಯಂತ್ರಣದ ದೃಷ್ಟಿಯಿಂದ ಸರಕಾರವು ಆರೋಗ್ಯ ಇಲಾಖೆಯ ಮೂಲಕ ವಿವಿಧ ಭಾಗಗಳಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಕಾರ್ಯ ಮಾಡುತ್ತಿದ್ದು, ಶುಕ್ರವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮೂಲಕ ಕೊರೊನಾ ಪರೀಕ್ಷೆ ನಡೆಸಲಾಯಿತು.


ತಾಲೂಕು ಕಚೇರಿಗೆ ಆಗಮಿಸಿದ ಸಾರ್ವಜನಿಕರಿಗೆ ಮನವಿ ಮಾಡಿ ಪರೀಕ್ಷೆ ನಡೆಸಲಾಯಿತು. ಒತ್ತಾಯಪೂರ್ವಕವಾಗಿ ಪರೀಕ್ಷೆ ನಡೆಸದೆ, ನಿರಾಕರಿಸಿದವರನ್ನು ಬಿಟ್ಟು ಬಿಡಲಾಯಿತು. ಬಹುತೇಕ ಮಂದಿ ಸ್ವ-ಇಚ್ಛೆಯಿಂದಲೇ ಪರೀಕ್ಷೆ ಮಾಡಿಸಿದರು. ಆಶಾ ಕಾರ್ಯಕರ್ತೆಯರು ಸಾರ್ವಜನಿಕರ ಮಾಹಿತಿ ಸಂಗ್ರಹಿಸಿ ಆರೋಗ್ಯ ಇಲಾಖೆ ಸಿಬಂದಿ ಪರೀಕ್ಷೆ ಕಾರ್ಯನಿರ್ವಹಿಸಿದರು.
ಸರಕಾರವು ಬಹುತೇಕ ಎಲ್ಲಾ ತಾಲೂಕು ಕಚೇರಿಗಳಲ್ಲೂ ಸಾರ್ವಜನಿಕರಿಗೆ ಕೊರೊನಾ ಟೆಸ್ಟ್ ಮಾಡುತ್ತಿದ್ದು, ಹೆಚ್ಚು ಪರೀಕ್ಷೆಗಳು ನಡೆದಾಗ ಹರಡುವಿಕೆಯ ನಿಯಂತ್ರಣ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಬಂಟ್ವಾಳ ತಾಲೂಕು ಕಚೇರಿಯಲ್ಲೂ ಪರೀಕ್ಷಾ ಕಾರ್ಯ ನಡೆಸಲಾಯಿತು ಎಂದು ತಹಶೀಲ್ದಾರ್ ರಶ್ಮಿ ಎಸ್.ಆರ್.ತಿಳಿಸಿದ್ದಾರೆ.
ಸಮುದಾಯಕ್ಕೆ ಹರಡುವುದನ್ನು ನಿಲ್ಲಿಸಿ ಆರೋಗ್ಯ ರಕ್ಷಣೆ ಮಾಡಲು ಜನರ ಸಹಕಾರ ಬೇಕು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...