Thursday, April 11, 2024

ಪೆಟ್ರೋಲ್ ಪಂಪ್ ಗೆ ನುಗ್ಗಿ ಕೆಲಸಗಾರರಿಗೆ ಚೂರಿ ತೋರಿಸಿ ರಾಬರಿ

ಬಂಟ್ವಾಳ: ಪೆಟ್ರೋಲ್ ಪಂಪ್ ಗಳಿಗೆ ನುಗ್ಗಿ ರಾಬರಿ ನಡೆಸಿದ ಘಟನೆ ಇಂದು ಮುಂಜಾನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ದಾಸಕೋಡಿ ಎಂಬಲ್ಲಿ ನಡೆದಿರುವ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಂಟ್ವಾಳ ತಾಲೂಕಿನ ಸೂರಿಕುಮೇರು ಸಮೀಪದ ದಾಸಕೋಡಿ ಎಂಬಲ್ಲಿರುವ ಪೆಟ್ರೋಲ್ ಪಂಪ್ ಗೆ ಮುಂಜಾನೆ ವೇಳೆ ಬೈಕಿನಲ್ಲಿ ಬಂದ ಮೂವರು ವ್ಯಕ್ತಿಗಳು ರಾಬರಿ ನಡೆಸಿದ ಬಗ್ಗೆ ದೂರು ದಾಖಲಾಗಿದೆ.

ದಾಸಕೋಡಿಯಲ್ಲಿರುವ ಪೆಟ್ರೋಲ್ ಪಂಪ್ 24 ಘಂಟೆ ಗ್ರಾಹಕರಿಗೆ ಸೇವೆ ನೀಡುತ್ತಿದ್ದು, ಮುಂಜಾನೆ ವೇಳೆ ಇಬ್ಬರು ಕೆಲಸಗಾರರು ಪಂಪ್ ನಲ್ಲಿ ಇರುವ ವೇಳೆ ಒಂದೇ ಬೈಕಿನಲ್ಲಿ ಬಂದ ಮೂವರು ವ್ಯಕ್ತಿಗಳು ಚೂರಿ ಹಾಗೂ ರಾಡ್ ತೋರಿಸಿ ಹಣ ನೀಡುವಂತೆ ಒತ್ತಾಯಿಸಿದರು, ಹಣ ನೀಡದಿದ್ದಲ್ಲಿ ಕೊಲ್ಲುವುದಾಗಿ ಬೆದರಿಸಿ 22 ಸಾವಿರ ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಅಪರಾಧ ವಿಭಾಗದ ಎಸ್.ಐ. ಕಲೈಮಾರ್, ಎ.ಎಸ್.ಐ.ಶೈಲೇಶ್, ಹೆಚ್.ಸಿ.ಸುರೇಶ್ ಪಡಾರ್, ಕೃಷ್ಣ ಕುಲಾಲ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿ‌ಸಿ ಕ್ಯಾಮರಾದಲ್ಲಿ ಸೆರೆ
ಬಂಟ್ವಾಳ ತಾಲೂಕಿನ ಎಲ್ಲಾ ಪಂಪ್ ಗಳ ಸಹಿತ ಮಂಗಳೂರು ವ್ಯಾಪ್ತಿಯ ಬಹುತೇಕ ಪಂಪ್ ಗಳಿಗೆ ನುಗ್ಗಿ ರಾಬರಿ ಮಾಡಲು ಯತ್ನಿಸಿ ದ ಘಟನೆ ನಡೆದಿದ್ದು ಎಲ್ಲವೂ ಸಿಸಿ ಕ್ಯಾಮರಾ ಗಳಲ್ಲಿ ಸೆರೆಯಾಗಿದೆ.
ಮಂಗಳೂರು ಉಜ್ಜೋಡಿ ಪಂಪ್ ಗೆ ನುಗ್ಗಿ ಅಲ್ಲಿನ ಪಂಪ್ ನಲ್ಲಿ ಪೆಟ್ರೋಲ್ ಹಾಕುತ್ತಿದ್ದ ಕೆಲಸಗಾರರನ್ನು ಬೆದರಿಸಿ 15 ಸಾವಿರ ಹಣವನ್ನು ಸುಲಿಗೆ ಮಾಡಿಕೊಂಡು ಬಂದಿರುವ ಅದೇ ಆರೋಪಿಗಳು, ಪಂಪ್ ವೆಲ್ ಪೆಟ್ರೋಲ್ ಪಂಪ್ ಗೆ ನುಗ್ಗಲು ಯತ್ನಿಸಿ ಸಾಧ್ಯವಾಗದೆ ಅಲ್ಲಿಂದ ಕಾಲ್ಕಿತ್ತು ಬಳಿಕ ದಾರಿ ಮಧ್ಯೆ ಬರುವ ಎಲ್ಲಾ ಪೆಟ್ರೋಲ್ ಪಂಪ್ ಗಳಿಗೆ ರಾಬರಿ ನಡೆಸಲು ಯತ್ನ ನಡೆಸಿ ವಿಫಲ ರಾಗಿದ್ದಾರೆ.
ಇವರು ರಾಬರಿ ನಡೆಸಲು ಪ್ರಯತ್ನ ಮಾಡಿರುವ ವಿಡಿಯೋ ಗಳು ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಪೋಲೀಸರು ಆರೋಪಿಗಳ ಬಂಧನಕ್ಕೆ ಬಲೆಬೀಸಿದ್ದಾರೆ.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...