Thursday, April 25, 2024

ಶಾಲೆಗಳಲ್ಲಿ ಅಡ್ಮಿಶನ್‍ಗೆ ಸರ್ಕಾರದಿಂದ ಅನುಮತಿ : ಸೆ.30ರೊಳಗೆ ಪೂರ್ಣಗೊಳಿಸಲು ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಮಕ್ಕಳ ಅಡ್ಮಿಶನ್ ಪ್ರಕ್ರಿಯೆ ಪ್ರಾರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅನುಮತಿ ಕೊಟ್ಟಿದೆ.
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಮಾರ್ಚ್ 12 ರಿಂದ ಶಾಲೆಗಳಿಗೆ ರಜೆ ಘೋಷಿಸಿತ್ತು. ಅದ್ದರಿಂದ ವಿದ್ಯಾರ್ಥಿಗಳು ಸುಮಾರು 5 ತಿಂಗಳುಗಳ ಹೆಚ್ಚಿನ ಕಾಲ ಶೈಕ್ಷಣಿಕ ಚಟುವಟಿಕೆಗಳಿಂದ ದೂರವಾಗಿದ್ದಾರೆ. ಅಲ್ಲದೇ ಕೋರೊನಾ ಹಿನ್ನೆಲೆಯಲ್ಲಿ ಭೌತಿಕ ಶಾಲೆಗಳ ಪುನರಾರಂಭದ ಕುರಿತು ಅನಿಶ್ಚಿತತೆ ಮುಂದುವರೆದಿರುವುದರಿಂದ ಮಕ್ಕಳನ್ನು ಪರ್ಯಾಯವಾಗಿ ಸಂಪರ್ಕಿಸಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿದೇ ಇದ್ದಲ್ಲಿ, ಅವರು ಕಲಿಕೆಯಲ್ಲಿ ಆಸಕ್ತಿಯನ್ನು ಕಳೆದುಕೊಳ್ಳುವ ಸಂಭವವಿರುತ್ತದೆ. ಆದ್ದರಿಂದ ಶಾಲೆಗಳು ಭೌತಿಕವಾಗಿ ಪ್ರಾರಂಭವಾಗುವವರೆಗೂ ಮಕ್ಕಳನ್ನು ಯುಕ್ತ ಪರ್ಯಾಯ ಮಾರ್ಗಗಳ ಮೂಲಕ ಸಂಪರ್ಕಿಸಿ ಅವರ ಮನೋಸ್ಥೈರ್ಯವನ್ನು ಹೆಚ್ಚಿಸುವ ಹಾಗೂ ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಅವಶ್ಯಕವಾಗಿದೆ.
ಅನ್‍ಲಾಕ್ 4.0 ಗೈಡ್‍ಲೈನ್ಸ್ ನಲ್ಲಿ ಸೆ.30ರವರೆಗೂ ಶಾಲೆಗಳನ್ನು ತೆರೆಯಲು ಅನುಮತಿ ಕೊಟ್ಟಿಲ್ಲ. ಆದರೂ, ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಸೆ.30ರೊಳಗೆ ಎಲ್ಲಾ ಪ್ರವೇಶಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಶಿಕ್ಷಣ ಇಲಾಖೆ ಈ ಸುತ್ತೋಲೆಯಲ್ಲಿ ಶುಲ್ಕ ಹೆಚ್ಚಳ ಮಾಡದಂತೆ ಸೂಚಿಸಿದ್ದು, ಕಳೆದ ವರ್ಷಕ್ಕಿಂತ ಹೆಚ್ಚಿನ ಶುಲ್ಕ ಪಡೆಯಬಾರದು. ಕಂತುಗಳಲ್ಲಿ ಶುಲ್ಕ ಪಾವತಿಸಲು ಅವಕಾಶ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

More from the blog

ಬಸ್ ನಲ್ಲಿ ಯುವತಿಗೆ ಕಿರುಕುಳ : ಸಂತ್ರಸ್ತ ಯುವತಿಯ ಮನೆಗೆ ಡಾ| ಪ್ರಭಾಕರ್ ಭಟ್ ಭೇಟಿ

ಬಂಟ್ವಾಳ:ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್.ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ದೈರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ ಮೆಚ್ಚುಗೆ...

ಬಿಜೆಪಿ ಗ್ಯಾರಂಟಿ ಬಿಜೆಪಿಯವರ ಬಾಯಲ್ಲಿದೆ, ಕಾಂಗ್ರೆಸ್ ಗ್ಯಾರಂಟಿ ಜನರ ಕೈಯಲ್ಲಿದೆ- ಮಾಜಿ ಸಚಿವ ಬಿ.ರಮಾನಾಥ ರೈ

ಕಾಂಗ್ರೆಸ್ ಗ್ಯಾರಂಟಿ ಸರಿಯಾ? ಮೋದಿ ಗ್ಯಾರಂಟಿಯಾ? ಇದು ಚರ್ಚೆಯಾಗಬೇಕಿದೆ, ಕೇಂದ್ರದ ಬಿಜೆಪಿ ಸರಕಾರ ವಚನ ಭ್ರಷ್ಟ ಸರಕಾರವಾಗಿದೆ, ಬಿಜೆಪಿ ಗ್ಯಾರಂಟಿ ಬಿಜೆಪಿಯವರ ಬಾಯಲ್ಲಿದೆ,ಕಾಂಗ್ರೆಸ್ ಗ್ಯಾರಂಟಿ ಜನರ ಕೈಯಲ್ಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ...

ಕೆ.ಎಸ್.ಎಸ್.ಕಾಲೇಜ್: ಅಧ್ಯಯನ ವಿನಿಮಯ ಕಾರ್ಯಕ್ರಮ 

ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ವಾಣಿಜ್ಯಶಾಸ್ತ್ರ ಮತ್ತು ಉದ್ಯಮಾಡಳಿತ ವಿಭಾಗವು ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದೊಂದಿಗೆ ಮಾಡಿಕೊಂಡ ಎಂ.ಓ.ಯು .ಪ್ರಕಾರ ಅಧ್ಯಯನ ವಿನಿಮಯ ಕಾರ್ಯಕ್ರಮ...

ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ: ಮತಯಾಚನೆ 

ವಿಟ್ಲ: ದ.ಕ ಜಿಲ್ಲಾ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ ನಡೆಯಿತು. ವಿಟ್ಲದ ಜೈನ ಬಸದಿಯಿಂದ ಹೊರಟ ರೋಡ್ ಶೋ ವಿಟ್ಲ ಮುಖ್ಯ ಪೇಟೆಯಲ್ಲಿ ಸಂಚರಿಸಿ,...