Saturday, April 6, 2024

ಸೆಪ್ಟೆಂಬರ್​​​ 21ರಿಂದ ಶಾಲೆ​​ ಭಾಗಶಃ ಆರಂಭ: ಕೇಂದ್ರದಿಂದ ಮಾರ್ಗಸೂಚಿ ಪ್ರಕಟ

ನವದೆಹಲಿ: ದೇಶಾದ್ಯಂತ ಸೆ.1ರಿಂದ ಅನ್​ಲಾಕ್​ 4.0 ನಿಯಮ ಜಾರಿಗೊಳಿಸಿದ ಕೇಂದ್ರ ಗೃಹ ಸಚಿವಾಲಯ ಸಾರ್ವಜನಿಕರ ಅನುಕೂಲಕ್ಕಾಗಿ ಮೆಟ್ರೋ ಸೇವೆ ಸೇರಿದಂತೆ ಅನೇಕ ಸಡಲಿಕೆ ನೀಡಿದೆ. ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಶಾಲೆಗಳನ್ನ ಭಾಗಶಃ ಪುನಾರಂಭಿಸಲು ಅನುಮತಿ ನೀಡಿ ಆದೇಶ ಹೊರಡಿಸಿದೆ.
ಸೆ.​​​ 21ರಿಂದ ದೇಶಾದ್ಯಂತ 9ರಿಂದ 12ನೇ ತರಗತಿವರಿಗೆ ಸ್ವಯಂ ಪ್ರೇರಿತವಾಗಿ ಶಾಲೆ ಆರಂಭಿಸಲು ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಹೊರಡಿಸಿದ್ದು, ಈ ವೇಳೆ ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಂದ ಮಾರ್ಗದರ್ಶನ ಪಡೆದುಕೊಳ್ಳಲು ಅನುಮತಿ ನೀಡಲಾಗಿದೆ. ಶಾಲೆಗೆ ಬರುವ ವಿದ್ಯಾರ್ಥಿಳು, ಶಿಕ್ಷಕರು, ಉದ್ಯೋಗಿಗಳು ಕೊರೊನಾ ಮಾರ್ಗಸೂಚಿ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಶಾಲೆಗೆ ಬರುವ ವಿದ್ಯಾರ್ಥಿಗಳ ಪೋಷಕರಿಂದ ಲಿಖಿತ ಒಪ್ಪಿಗೆ ಪಡೆದುಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕವೂ ವಿದ್ಯಾಭ್ಯಾಸ ಮುಂದುವರೆಸಬಹುದಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ಮಾತನಾಡಿ, ಸರ್ಕಾರ ಇದೀಗ ಹಂತ ಹಂತವಾಗಿ ಅನ್​ಲಾಕ್​​ ಪ್ರಕ್ರಿಯೆ ಆರಂಭಿಸಿದ್ದು, ಇದೀಗ ಶಾಲಾ-ಕಾಲೇಜ್​ ಆರಂಭ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಶಾಲೆಗಳಲ್ಲಿ ಕನಿಷ್ಠ ಆರು ಅಡಿ ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಮಾಸ್ಕ್‌ ಧರಿಸುವುದು, ಸ್ಯಾನಿಟೈಸರ್‌ ಬಳಸುವುದು ಕಡ್ಡಾಯವಾಗಿದೆ. ಹಾಗೆಯೇ ಶಾಲೆಯ ಆವರಣದಲ್ಲಿ ಉಗುಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಸೆಂಬ್ಲಿಗಳು, ಕಾರ್ಯಕ್ರಮಗಳನ್ನು ನಡೆಸುವವುದನ್ನು ಕೂಡಾ ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಂಟೈನ್ಮೆಂಟ್​​​ ಪ್ರದೇಶ ಹೊರತು ಪಡಿಸಿ ಶಾಲಾ-ಕಾಲೇಜ್​ ತೆರೆಯಲಿದ್ದು, ಉಳಿದಂತೆ ಕಂಟೈನ್ಮೆಂಟ್​​ ಪ್ರದೇಶಗಳಲ್ಲಿ ಈ ಚಟುವಟಿಕೆಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ಧಾರೆ.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...