Wednesday, October 18, 2023

ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಶಿಕ್ಷಕರ ದಿನಾಚರಣೆ

Must read

ಬೆಳ್ತಂಗಡಿ: ಬೆಳ್ತಂಗಡಿ ಶಿಕ್ಷಕರ ದಿನಾಚರಣೆ ಸಮಿತಿ, ತಾಲೂಕು ಪಂಚಾಯತ್, ಬೆಳ್ತಂಗಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬೆಳ್ತಂಗಡಿ ನಗರ ಪಂಚಾಯತ್ ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ. ಧ.ಮಂ. ಸ್ವಾಮಿ ಕಲಾ ಭವನದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮ ಉದ್ಘಾಟಿಸಿದರು.

ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಒಟ್ಟು 42 ಮಂದಿ ನಿವೃತ ಶಿಕ್ಷಕರು ಹಾಗು 2019-20ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪಡೆದ ಶಿಕ್ಷಕರನ್ನು ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್, ತಾ.ಪಂ. ಅಧ್ಯಕ್ಷೆ ದಿವ್ಯ ಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಕಲ್ಮಂಜ, ಜಿ.ಪಂ. ಸದಸ್ಯೆ ಸೌಮ್ಯಲತಾ ಜಯಂತ್ ಗೌಡ ಮತ್ತಿತರು ಉಪಸ್ಥಿತರಿದ್ದರು.

 

More articles

Latest article