Wednesday, April 17, 2024

ಗ್ರಾಮೀಣ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮದ ಉದ್ಘಾಟನೆ

ಉಜಿರೆ: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ 13 ದಿನಗಳ ಗ್ರಾಮೀಣ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್‍ಯಕ್ರಮವನ್ನು ರುಡ್‌ಸೆಟ್ ಸಂಸ್ಥೆಗಳ ಕೇಂದ್ರ ಕಛೇರಿಯ ಕಾರ್ಯನಿರ್ವಾಹಕ ನಿರ್ದೇಶಕ ಎಮ್. ಜನಾರ್ಧನ್ ರವರು ಉದ್ಘಾಟಿಸಿ ಮಾತನಾಡುತ್ತಾ, ಈ ವರ್ಷದ ಮೊದಲ ತರಬೇತಿ ಇದಾಗಿದ್ದು, ಇದರ ಪ್ರಯೋಜನವನ್ನು ಪಡೆದು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ನಿರ್ದೇಶಕ ಪಡದಯ್ಯ ಹಿರೇಮಠ್ ಅತಿಥಿಗಳನ್ನು ಸ್ವಾಗತಿಸಿ, ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ವಂದಿಸಿದರು. ಹಿರಿಯ ಉಪನ್ಯಾಸಕಿ ಅನಸೂಯ ಕಾರ್ಯಕ್ರಮ ನಿರೂಪಿಸಿದರು. ಈ ತರಬೇತಿಯಲ್ಲಿ ಒಟ್ಟು 22 ಜನ ಶಿಭಿರಾರ್ಥಿಗಳು ಭಾಗವಹಿಸುತ್ತಿದ್ದಾರೆ.

More from the blog

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಶರಾಬು ಕುಡಿಯಲು ಆಕ್ಷೇಪ… ಯುವಕನಿಗೆ ಹಲ್ಲೆ : ದೂರು, ಪ್ರತಿದೂರು ದಾಖಲು

ಮಚ್ಚಿನ: ಹೊಟೇಲ್‌ ಕಾರ್ಮಿಕನನ್ನು ಶರಾಬು ಕುಡಿಯಲು ಕರೆಯಬಾರದು ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ಸಂಭವಿಸಿದೆ. ಮಚ್ಚಿನದ ಪ್ರತಿಭಾ ರೈ ಅವರ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಅವರನ್ನು ಆರೋಪಿ...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...