Tuesday, April 16, 2024

ಜೀವನಕ್ಕಾಗಿ ವ್ಯವಹಾರ ಇರಲಿ ವ್ಯವಹಾರಕ್ಕಾಗಿ ಜೀವನ ಬೇಡ: ಎ.ವಿ. ಶೆಟ್ಟಿ

ಉಜಿರೆ: ಗ್ರಾಮೀಣ ಉದ್ಯಮ ಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ ಸಮಾರಂಭವು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಎ.ವಿ. ಶೆಟ್ಟಿಯವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸುತ್ತಾ, ಜೀವನಕ್ಕಾಗಿ ವ್ಯವಹಾರ ಇರಲಿ ವ್ಯವಹಾರಕ್ಕಾಗಿ ಜೀವನ ಬೇಡ. ಉದ್ಯಮದಲ್ಲಿ ಸವಾಲುಗಳು ಬಂದಾಗ ಮುನ್ನುಗ್ಗುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ ಎಂದು ಹಿತವಚನ ನೀಡಿದರು.

ರುಡ್‌ಸೆಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಎಮ್. ಜನಾರ್ದನ್‌ರವರು ಅಧ್ಯಕ್ಷೀಯ ಮಾತುಗಳನ್ನಾಡಿ, ಪ್ರಾಮಾಣಿಕವಾಗಿ ವ್ಯವಹರಿಸಿ ಎಂದರು. ನಿರ್ದೇಶಕ ಪಡದಯ್ಯ ಹಿರೇಮಠ್‌ರವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿ, ಅನಸೂಯ ವಂದಿಸಿದರು. 13 ದಿನಗಳ ಈ ಕಾರ್‍ಯಕ್ರಮದಲ್ಲಿ 22 ಶಿಬಿರಾರ್ಥಿಗಳು ಭಾಗವಹಿಸಿದ್ದರು.

More from the blog

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಶರಾಬು ಕುಡಿಯಲು ಆಕ್ಷೇಪ… ಯುವಕನಿಗೆ ಹಲ್ಲೆ : ದೂರು, ಪ್ರತಿದೂರು ದಾಖಲು

ಮಚ್ಚಿನ: ಹೊಟೇಲ್‌ ಕಾರ್ಮಿಕನನ್ನು ಶರಾಬು ಕುಡಿಯಲು ಕರೆಯಬಾರದು ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ಸಂಭವಿಸಿದೆ. ಮಚ್ಚಿನದ ಪ್ರತಿಭಾ ರೈ ಅವರ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಅವರನ್ನು ಆರೋಪಿ...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...