Saturday, October 28, 2023

ಕೇಂದ್ರ ಸರ್ಕಾರದಿಂದ ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ

Must read

ನವದೆಹಲಿ : ಕೇಂದ್ರ ಗೃಹ ಸಚಿವಾಲಯ ಇಂದು, ಅಕ್ಟೋಬರ್ 1ರಿಂದ ಜಾರಿಗೆ ಬರುವ ‘ಅನ್ ಲಾಕ್ 5.0’ ರ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.

ಈ ಅನ್ ಲಾಕ್ 5.0 ಮಾರ್ಗಸೂಚಿ ಅನ್ವಯ, ಅಕ್ಟೋಬರ್ 15 ರಿಂದ ಚಿತ್ರಮಂದಿರಗಳು, ಥಿಯೇಟರ್ ಗಳು ಮತ್ತು ಮಲ್ಟಿಪ್ಲೆಕ್ಸ್ ಗಳು ತಮ್ಮ ಆಸನದ ಸಾಮರ್ಥ್ಯದ ಶೇಕಡಾ 50 ರಷ್ಟು ಪ್ರೇಕ್ಷಕರನ್ನು ಹೊಂದಿರುವಂತೆ ಆಸನಗಳನ್ನು ವ್ಯವಸ್ಥೆ ಮಾಡಿ ಭರ್ತಿ ಮಾಡಿಕೊಂಡು ತೆರೆಯಲು ಅನುಮತಿಯನ್ನು ನೀಡಲಾಗಿದೆ. ಅದಲ್ಲದೇ ಕೆಲ ಷರತ್ತುಗಳನ್ನು ಕೂಡ ವಿಧಿಸಿದೆ.
ಇನ್ನೂ ಶಾಲೆಗಳು ಮತ್ತು ಕೋಚಿಂಗ್ ಸಂಸ್ಥೆಗಳನ್ನು ಪುನಃ ತೆರೆಯುವುದಕ್ಕೆ ಸಂಬಂಧಿಸಿದಂತೆ, 2020ರ ಅಕ್ಟೋಬರ್ 15ರ ನಂತರ ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳಿಗೆ ತಿಳಿಸಲಾಗುತ್ತದೆ ಎಂಬುದಾಗಿ ಮಾರ್ಗಸೂಚಿಯಲ್ಲಿ ತಿಳಿಸಿದ್ದು, ಅದಕ್ಕಾಗಿ ನೂತನ ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿಯೂ ಅನ್ ಲಾಕ್ 5.0 ಮಾರ್ಗಸೂಚಿಯಲ್ಲಿ ತಿಳಿಸಿದೆ.

More articles

Latest article