Thursday, April 18, 2024

ಪತಿಯಿಂದ ಪತ್ನಿ ಹಾಗೂ ಪತ್ನಿಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ

ಉಪ್ಪಿನಂಗಡಿ: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಉಪ್ಪಿನಂಗಡಿಯ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಇಂದು ಮುಂಜಾನೆ ನಡೆದ ಬಗ್ಗೆ ವರದಿಯಾಗಿದೆ. ಕೌಟುಂಬಿಕ ಕಲಹದ ಕಾರಣದಿಂದ ಈ ಪ್ರಕರಣ ನಡೆದಿದೆ ಎನ್ನಲಾಗುತ್ತಿದೆ.
ಉಪ್ಪಿನಂಗಡಿಯ ನೆಲ್ಯಾಡಿ ನಿವಾಸಿ ಬಿಜು (38) ಎಂಬಾತ ತನ್ನ ಪತ್ನಿ ಶೈನಿ (33) ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ (36) ಎಂಬವರ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಇದರ ಪರಿಣಾಮ ಇಬ್ಬರ ಮುಖ, ಕಣ್ಣಿನ ಭಾಗ ಸುಟ್ಟುಹೋಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಇದೆ.
ಬಿಜು ಹಾಗೂ ಆತನ ಪತ್ನಿ ಶೈನಿ ನಡುವೆ ಮನಸ್ತಾಪವಿತ್ತು. ಹೀಗಾಗಿ ಶೈನಿ ಕೊಣಾಲು ಗ್ರಾಮದ ಪಾಂಡಿಬೆಟ್ಟುಯಲ್ಲಿರುವ ತನ್ನ ತಂದೆಯ ತಮ್ಮನ ಮನೆಯಲ್ಲಿ ಮಗಳೊಂದಿಗೆ ವಾಸವಾಗಿದ್ದರು. ಅಲ್ಲಿಂದ ಶೈನಿಯವರು ತನ್ನ ಚಿಕ್ಕಮ್ಮ ಝಾನ್ಸಿಯವರ ಜೊತೆಗೆ ನೆಲ್ಯಾಡಿಯ ಆಶ್ರಮವೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದರು.
ಎಂದಿನಂತೆ ಇಂದು ಕೂಡಾ ಬೆಳಿಗ್ಗೆ ಆರು ಗಂಟೆಯ ವೇಳೆಗೆ ಶೈನಿ ಹಾಗೂ ಆಕೆಯ ಚಿಕ್ಕಮ್ಮ ಝಾನ್ಸಿಯವರು ಮನೆಯಿಂದ ಕೆಲಸಕ್ಕೆ ಹೋಗಲೆಂದು ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾದು ಕುಳಿತಿದ್ದ ಆರೋಪಿ ಬಿಜು ಇಬ್ಬರ ಮೇಲೂ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ.
ಈ ವಿಷಯ ತಿಳಿಯುತ್ತಲೇ ಶೈನಿ ಅವರ ಚಿಕ್ಕಪ್ಪ ಏಲಿಯಸ್‌, ಸ್ಥಳಕ್ಕೆ ಆಗಮಿಸಿ, ಇಬ್ಬರನ್ನೂ ರಿಕ್ಷಾದಲ್ಲಿ ನೆಲ್ಯಾಡಿಯ ಆಸ್ಪತ್ರೆಯೊಂದಕ್ಕೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ ಹಾಗೂ ದೇಹದಲ್ಲಿ ತೀವ್ರ ಸ್ವರೂಪದ ಸುಟ್ಟ ಗಾಯವಾಗಿದೆ ಎನ್ನಲಾಗಿದೆ.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...