Saturday, April 6, 2024

ಯುವತಿಯರ ಮತಾಂತರಕ್ಕೆ ಯತ್ನ…! ವಿಟ್ಲ ಪೊಲೀಸರಿಂದ ದಾಳಿ: ಮೂವರ ತನಿಖೆ

ವಿಟ್ಲ: ಕ್ರೈಸ್ತ ಸಮುದಾಯಕ್ಕೆ ಸೇರಿದ ಯುವಕನೊಬ್ಬ ವಿವಿಧ ಆಮೀಷಗಳನ್ನು ಒಡ್ಡಿ ಹಿಂದು ಸಮುದಾಯದ ಇಬ್ಬರು ಯುವತಿಯರನ್ನು ತನ್ನ ಮನೆಗೆ ಕರೆಯಿಸಿ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ ಎಂದು ಆರೋಪಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ ಘಟನೆ ಕನ್ಯಾನ ಸಮೀಪದ ಕೇಪುಳಗುಡ್ಡೆ ಎಂಬಲ್ಲಿ ನಡೆದಿದೆ‌.

ಕನ್ಯಾನ ಕಾಲೇಜು ಸಮೀಪ ಕ್ರೈಸ್ತ ಸಮುದಾಯದ ಯುವಕನಿಗೆ ಸಂಬಂಧಿಸಿದ ಫ್ಯಾನ್ಸಿ ಅಂಗಡಿ ಇದ್ದು, ಅಲ್ಲಿಗೆ ಬರುತ್ತಿದ್ದ ಯುವತಿಯರಿಗೆ ವಿವಿಧ ಆಮೀಷಗಳನ್ನು ನೀಡುತ್ತಿದ್ದ. ಅವರನ್ನು ಬಲವಂತವಾಗಿ ಪುಸಲಾಯಿಸಲು ಯತ್ನಿಸುತ್ತಿದ್ದ ಎಂಬ ಆರೋಪವಿದೆ‌. ಕರೋಪಾಡಿ ಗ್ರಾಮದ ಒಂದೇ ಮನೆಯ ಅಕ್ಕ ಹಾಗೂ ಸಹೋದರಿಯರಿಗೆ ಆಮೀಷ ಒಡ್ಡಿ ಅವರನ್ನು ಮನೆಗೆ ಕರೆ ತಂದಿದ್ದಾನೆ. ಈ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀರಿಗೆ ಮಾಹಿತಿ ನೀಡಿದ್ದು, ಪೊಲೀಸರು ದಾಳಿ ನಡೆಸಿದ್ದಾರೆ. ಇದೀಗ ಮೂವರನ್ನು ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಮಾಯಕ ಹಿಂದು ಯುವತಿಯರ ತಲೆ ಕೆಡಿಸಿ, ಮತಾಂತರಕ್ಕೆ ಯತ್ನಿಸುತ್ತಿದ್ದ ಯುವಕನ ಹಾಗೂ ಆತನಿಗೆ ಕುಮ್ಮಕ್ಕು ನೀಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ವಿಶ್ವಹಿಂದೂ ಪರಿಷತ್, ಭಜರಂಗದಳ, ಹಿಂದು ಜಾಗರಣ ವೇದಿಕೆ ಆಗ್ರಹಿಸಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...