Tuesday, April 9, 2024

ವಿಟ್ಲ: ವಸತಿ ಯೋಜನೆ ಫಲಾನುಭವಿಗಳ ಆಯ್ಕೆ ವಿಶೇಷ ಸಭೆ

ವಿಟ್ಲ: ಪ್ರತಿ ಗ್ರಾ.ಪಂನಲ್ಲಿ ಇರುವ ಸರಕಾರಿ ಜಾಗಗಳನ್ನು ಗುರುತಿಸಿ, ಅದರಲ್ಲಿ ಮುಂದಿನ 25 ವರ್ಷಗಳಿಗೆ ಬೇಕಾಗುವ ಜಾಗಗಳನ್ನು ಪಂಚಾಯತ್ ಹೆಸರಿನಲ್ಲಿ ಕಾಯ್ದಿರಿಸುವ ಪ್ರಕ್ರಿಯೆ ಪ್ರತಿಯೊಂದು ಗ್ರಾ.ಪಂ ನಿಂದ ಆಗಬೇಕಾಗಿದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವಸತಿ ರಹಿತರಿಗೆ ನಾವು ಜಾಗವನ್ನು ನಾವೇ ಖರೀದಿಸಿ ಕೊಡಬೇಕಾದ ಪರಿಸ್ಥಿತಿ ಬರಬಹುದು. ಆದ್ದರಿಂದ ಈಗಲೇ ನಾವು ಎಚ್ಚೆತ್ತುಕೊಂಡು ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮುಂಚಿತವಾಗಿಯೇ ಮಾಡಬೇಕು ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಹೇಳಿದರು.
ಅವರು ಮಂಗಳವಾರ ವಿಟ್ಲದ ಅತಿಥಿಗೃಹದಲ್ಲಿ ನಡೆದ ಹೋಬಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸತಿ ಯೋಜನೆ ಫಲಾನುಭವಿಗಳ ಆಯ್ಕೆ ಕುರಿತು ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ತಮ್ಮ ವ್ಯಾಪ್ತಿಯ ರಸ್ತೆ, ದಾರಿಗಳ ಬಗ್ಗೆ ಸ್ಪಷ್ಟ ದಾಖಲೆಗಳಿರಬೇಕು. ಮನೆ ಕಟ್ಟುವ ಪ್ರತಿಯೊಬ್ಬರ ಜಾಗ ಪರಿಶೀಲನೆ ಕಾನೂನುಬದ್ಧವಾಗಿ ಮಾಡಬೇಕು. ಯಾವುದೇ ಅಧಿಕಾರಿಗಳು ಕಣ್ಣುಮುಚ್ಚಿಕೊಂಡು ಕೆಲಸ ಮಾಡಬೇಡಿ. ನಿಯಮ ಪಾಲನೆ ಮಾಡದೆ ಕಟ್ಟಡ ಕಟ್ಟುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ. ಆದರೆ ಯಾವೊಬ್ಬರಿಗೂ ತೊಂದರೆ ಮಾಡಬೇಡಿ. ಆದ್ದರಿಂದ ಪ್ರತಿ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದರು.
ನಮ್ಮ ಈ ಗ್ರಾಮ ಪಂಚಾಯಿತಿಗಳು ಕೇವಲ ಹೆಸರಿಗಷ್ಟೇ ಇದ್ದ ಹಾಗಿದೆ. ಅಧಿಕಾರಿಗಳಿಗೆ ಸಾಧನೆ ಮಾಡುವ ಹುಮ್ಮಸ್ಸು ಇದ್ದ ಹಾಗೆ ಕಾಣುತ್ತಿಲ್ಲ. ಪ್ರತಿಯೊಬ್ಬರೂ ಸರಕಾರದಿಂದ ಸಿಗುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಕೆ ಮಾಡುವಲ್ಲಿ ಪ್ರಯತ್ನಿಸಬೇಕು. ನರೇಗ ಯೋಜನೆಯಡಿಯಲ್ಲಿ ಬೇಕಾದಷ್ಟು ಅನುದಾನ ಬರುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಸಿಗುವ ಸೌಲಭ್ಯಗಳ ಕುರಿತು ಗ್ರಾಮ ಸಭೆ, ವಾರ್ಡ್ ಸಭೆಗಳ ಮೂಲಕ ಜನರಿಗೆ ತಿಳಿಹೇಳುವ ಕೆಲಸ ಮಾಡಬೇಕು ಎಂದರು.
ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ಪುಣಚ ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ಹರಿ ಪ್ರಸಾದ್, ಕೇಪು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯ ಅರುಣ್ ವಿಟ್ಲ ಭಾಗವಹಿಸಿದ್ದರು. ನಾನಾ ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...