Saturday, April 6, 2024

ಸ್ಕೂಟರ್ -ಟೆಂಪೊ ಪರಸ್ಪರ ಡಿಕ್ಕಿ: ಸವಾರ ಸಾವು

ಬಂಟ್ವಾಳ: ಸ್ಕೂಟರ್ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಬಿಸಿರೋಡು ನಿವಾಸಿ ಸಿವಿಲ್ ಇಂಜಿನಿಯರ್ ವಸಂತ ಪೂಜಾರಿ (55) ಮೃತ ಪಟ್ಟ ವ್ಯಕ್ತಿ.
ಕಲ್ಲಡ್ಕದಿಂದ ಬಿಸಿರೋಡಿಗೆ ಬರುವ ವೇಳೆ ಎದುರಿನಿಂದ ಬಂದ ಗೂಡ್ಸ್ ಟೆಂಪೋ ರಿಕ್ಷಾ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿದ್ದರು. ಗಂಭೀರ ಗಾಯಗೊಂಡ ಸ್ಕೂಟರ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸವಾರ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ. ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...