Monday, April 8, 2024

ಕೃಷಿ ಇಲಾಖೆಯ ಆತ್ಮ ಯೋಜನೆ ಅಡಿಯಲ್ಲಿ ರೈತರ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ

ಬಂಟ್ವಾಳ: ಭತ್ತ ಬೆಳೆಯುವ ಮೂಲಕ ಕೃಷಿಗೆ ಪ್ರಾಮುಖ್ಯತೆ ನೀಡುವ ಕೃಷಿ ಇಲಾಖೆಯ ಆತ್ಮ ಯೋಜನೆ ಅಡಿಯಲ್ಲಿ ರೈತರ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ಬಂಟ್ವಾಳ ತಾಲೂಕು ಕರ್ಪೆ ಗ್ರಾಮದ ನಡಿಬೈಲು ಎಂಬಲ್ಲಿಯ ಭತ್ತದ ಕೃಷಿಕರಾದ ದಾಮೋದರ ಶೆಣೈ ರವರ ಮನೆಯಲ್ಲಿ ಜರಗಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಮ್ಯಾನೇಜರ್ ಸಂದೇಶ್ ಭತ್ತ ಕೃಷಿ ಬಗ್ಗೆಗಿನ ಅನಿವಾರ್ಯತೆಯ ಮಾಹಿತಿ ನೀಡಿದರು.ಕೃಷಿ ಇಲಾಖೆಯ ಅಧಿಕಾರಿ ನಾರಾಯಣ ನಾಯ್ಕ್, ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ,ಕೃಷಿಕರಾದ ದಾಮೋದರ ಶೆಣೈ,ನಾರಾಯಣ ನಾಯಕ್,ಮೋನಪ್ಪ ಪೂಜಾರಿ, ವಸಂತ ಪ್ರಭು,ರಮೇಶ್ ಶೆಣೈ,ನಾರಾಯಣ ಭಟ್,ವಸಂತಿ ನಾಯಕ್,ಗುಣಪಾಲ ಶೆಟ್ಟಿ, ಬಾಲಕೃಷ್ಣ ಪ್ರಭು,ಹರ್ಷಿತ್ ಜೈನ್,ಸದಾಶಿವ ಪ್ರಭು.ಸಂತೋಷ ಶೆಣೈ,ಮತ್ತಿತರರು ಭಾಗವಹಿಸಿದ್ದರು.

More from the blog

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...