Saturday, April 20, 2024

ಬಡಗಕಜೆಕಾರು ಶ್ರೀ ವಿಷ್ಣು ಮೂರ್ತಿ ಮಿತ್ರ ಮಂಡಳಿಯ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ

ಪುಂಜಾಲಕಟ್ಟೆ: ಬಡಗಕಜೆಕಾರು ಶ್ರೀ ವಿಷ್ಣು ಮೂರ್ತಿ ಮಿತ್ರ ಮಂಡಳಿ (ರಿ ) ಮಾಡ ಇದರ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ ಬಡಗ ಕಜೆಕಾರ್ ಶಾಲಾ ವಠಾರದಲ್ಲಿ ನಡೆಯಿತು.

ನೂತನ ಅದ್ಯಕ್ಷರಾಗಿ ಕೃಷ್ಣಪ್ಪ ಮಾಡ ಹಾಗೂ ಉಪಾಧ್ಯಕ್ಷರಾಗಿ ವಿನುತ್ ಮನ್ಯ ಇವರು 2020-2021 ನೆ ಸಾಲಿನ ದಾಧಿಕಾರಿಗಳ ಪರವಾಗಿ ಸ್ಥಾಪಕಾಧ್ಯಕ್ಷ ಪ್ರಶಾಂತ್ ಪೂಜಾರಿ ಮಾಡ ಇವರಿಂದ ಮಂಡಳಿಯ ದಾಖಲೆ ಪತ್ರ, ಪುಸ್ತಕ ಪಡೆಯುವದರ ಮೂಲಕ ಅಧಿಕಾರ ಸ್ವೀಕರಿಸಿದರು.

ಈ ಕಾರ್ಯಕ್ರಮದಲ್ಲಿ ಮಂಡಳಿಯ ಮಾಜಿ ಅಧ್ಯಕ್ಷ ಪ್ರವೀಣ್ ಮಾಡ, ಬಿಜೆಪಿ ವಾರ್ಡ್ ಅಧ್ಯಕ್ಷರು ಸತೀಶ್ ಕಜೆಕಾರ್, ಹಿಂದೂ ಜಾಗರಣ ಪ್ರಧಾನ ಕಾರ್ಯದರ್ಶಿ ತಾರಾನಾಥ್, ಮಂಡಳಿ ಪ್ರಮುಖರಾದ ದಿನೇಶ್ ಸುಬ್ಬರ ಬೈಲು, ಉಮೇಶ್ ಮಾಡ,  ಲೋಕೇಶ್ ಮಾಡ, ಸಂದೇಶ್ ಮಾಡ, ಮಂಜುನಾಥ್ ಮಾಡ,  ಸುರೇಶ್ ಮಾಡ ಹಾಗೂ ಸದಸ್ಯರು ಹಿತೈಷಿಗಳು ಉಪಸ್ಥಿತರಿದ್ದರು.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...

ನೇತ್ರಾವತಿ ನದಿ ತೀರದ ಕೃಷಿಕರ ಪಂಪ್ ಸೆಟ್ ಗಳ ವಿದ್ಯುತ್ ಸ್ಥಗಿತ : ರೈತರಿಂದ ಪ್ರತಿಭಟನೆ

ಬಂಟ್ವಾಳ: ದ.ಕ.ಜಿಲ್ಲಾಡಳಿತವೂ ಮಂಗಳೂರು ನಗರಕ್ಕೆ ಕುಡಿಯುವ ನೀರು ಕೊರತೆಯಾಗುತ್ತಿದೆ ಎಂದು ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತ ಮಾಡಿರುವ ವಿರುದ್ಧ ರೈತರು ಬಂಟ್ವಾಳ ತಾಲೂಕು ಆಡಳಿತ ಸೌಧದ...