Friday, April 26, 2024

ವಿದ್ಯಾರ್ಥಿ ಕಾಂಗ್ರೆಸ್ ನ ವಿಶಿಷ್ಟ ಕಾರ್ಯಕ್ರಮ ನಮ್ಮೂರ ಹಮ್ಮೆ

ಬಂಟ್ವಾಳ: ಮಾಣಿ ವಲಯ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ನ ವತಿಯಿಂದ ಮಾಣಿ ನಾರಾಯಣ ಗುರು ಮಂದಿರದಲ್ಲಿ ಜರಗಿದ ಸಭೆಯಲ್ಲಿ, ಮಾಣಿ ಗ್ರಾಮದ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ಕಾಂಗ್ರೆಸ್ ನ ವಿಶಿಷ್ಟ ಕಾರ್ಯಕ್ರಮ ನಮ್ಮೂರ ಹಮ್ಮೆ ಯ ಮೂಲಕ ಗೌರವಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಮಾಜಿ ಸಚಿವ ಬಿ. ರಮಾನಾಥ ರೈ ಯವರು ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುಳಾ ಮಾಧವ ಮಾವೆ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಯಂ.ಯಸ್. ಮಹಮ್ಮದ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಮಾಣಿ ಸದಸ್ಯೆ ಐಡಾ ಸುರೇಶ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ನವಾಝ್, ವಿದ್ಯಾರ್ಥಿ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಫಾರೂಕ್ ಬಯಾಬೆ, ತಾಲೂಕು ಅಧ್ಯಕ್ಷ ವಿನಯ್, ಮಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳಾದ ಅಬ್ದುಲ್ ಅಜೀಜ್, ನಿರಂಜನ್ ರೈ, ಅಬ್ದುಲ್ ರಝಾಕ್ ಮತ್ತಿತರರು ಉಪಸ್ಥಿತರಿದ್ದರು.

More from the blog

ಹಕ್ಕಿಜ್ವರ ಭೀತಿ : ದ.ಕ ಗಡಿ ಭಾಗಗಳಲ್ಲಿ ತಪಾಸಣೆ

ಮಂಗಳೂರು: ಕೇರಳದ ಆಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ವಾಹನಗಳ ತಪಾಸಣೆ ಆರಂಭಗೊಂಡಿದೆ. ಗಡಿ ಭಾಗವಾದ...

ಲೋಕಸಭಾ ಚುನಾವಣೆ : ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಮಸ್ಟರಿಂಗ್ ಕಾರ್ಯ

ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯವು ಈ ದಿನ ಇನ್ಫೆಂಟ್ ಜೀಸಸ್ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಐವರು ಮಾಸ್ಟರ್ ಟ್ರೈನರ್ ಗಳ ನೇತೃತ್ವದಲ್ಲಿ...

ಮತದಾನದಂದು ಫೋಟೋ ಕ್ಲಿಕ್ಕಿಸಿ.. 25 ಸಾವಿರ ರೂ. ಬಹುಮಾನ ಗೆಲ್ಲಿ

ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಇನ್ನು ಮತದಾನದ ಸಂದರ್ಭದಲ್ಲಿ ರಾಜ್ಯ ಚುನಾವಣಾ ಅಯೋಗವು ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಂಡಿದೆ. ನಾಳೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಲಿದ್ದು, ಸುಮಾರು 2,88,19,342 ಮತದಾರರು...

ಬಂಟ ಬ್ರಿಗೇಡ್ ಹೆಸರಿನಲ್ಲಿ ಕರಪತ್ರ ತಯಾರಿಸಿ ಅಪಪ್ರಚಾರ : ಪಣೋಲಿಬೈಲಿನಲ್ಲಿ ಸಜೀಪಮೂಡ ಬಿಜೆಪಿ ಕಾರ್ಯಕರ್ತರಿಂದ ಪ್ರಾರ್ಥನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಕಾವು ಏರುತ್ತಿದ್ದು ಹಿಂದುತ್ವದ ಭದ್ರಕೋಟೆಯನ್ನು ಚಿದ್ರಮಾಡುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಅಸ್ತಿತ್ವವೇ ಇಲ್ಲದೇ ಇರುವ ಬಂಟ ಬ್ರಿಗೇಡ್ ಎಂಬ ನಾಮದ ಅಡಿಯಲ್ಲಿ ಕರಪತ್ರ ತಯಾರಿಸಿ ಜಾತಿ ಜಾತಿಗಳ...