Wednesday, April 10, 2024

ವಾರಸುದಾರರಿಗೆ ನಗದು ಹಾಗೂ ಮೌಲ್ಯಯುತ ದಾಖಲೆಗಳನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಸತ್ತಾರ್ ಗೂಡಿನಬಳಿ

ಬಂಟ್ವಾಳ : ಬಿ.ಸಿ. ರೋಡಿನ ಅಟೋ ರಿಕ್ಷಾ ಚಾಲಕ, ಬಿ ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಅಬ್ದುಲ್ ಸತ್ತಾರ್ ಅವರು ಮಂಗಳವಾರ (ಅ 6) ತನ್ನ ರಿಕ್ಷಾದಲ್ಲಿ ಪ್ರಯಾಣಿಕರು ಬಿಟ್ಟು ಹೋದ ನಗದು ಹಾಗೂ ಇನ್ನಿತರ ಮೌಲ್ಯಯುತ ದಾಖಲೆಗಳಿದ್ದ ಪರ್ಸನ್ನು ವಾರಸುದಾರರನ್ನು ಹುಡುಕಿ ಮರಳಿಸುವ ಮೂಲಕ ಮತ್ತೊಮ್ಮೆ ತನ್ನ ಪ್ರಾಮಾಣಿಕತೆ ಮೆರೆದಿದ್ದಾರೆ.
ಸತ್ತಾರ್ ಅವರು ಮಂಗಳವಾರ ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ತುಂಬೆಯಿಂದ ಬಿ.ಸಿ. ರೋಡು ಕಡೆ ತನ್ನ ಅಟೋ ರಿಕ್ಷಾದಲ್ಲಿ ಬರುತ್ತಿದ್ದ ವೇಳೆ ತುಂಬೆ ಜಂಕ್ಷನ್ನಿನಲ್ಲಿ ಇಬ್ಬರು ಅಸ್ಸಾಂ ಮೂಲದ ವ್ಯಕ್ತಿಗಳು ರಿಕ್ಷಾಯೇರಿದ್ದರು. ಇವರು ಬಿ.ಸಿ. ರೋಡಿನ ಭಗವತಿ ಬ್ಯಾಂಕ್ ಬಳಿ ಅಟೋ ರಿಕ್ಷಾದಿಂದ ಇಳಿದಿದ್ದರು. ಬಳಿಕ ಸತ್ತಾರ್ ಎಂದಿನಂತೆ ಬಿ ಸಿ ರೋಡಿನ ರಿಕ್ಷಾ ಪಾರ್ಕಿನಲ್ಲಿ ನಿಂತಿದ್ದಾಗ ರಿಕ್ಷಾದ ಹಿಂದಿನ ಆಸನದಲ್ಲಿ ಪರ್ಸ್ ಬಿದ್ದಿರುವುದು ಗಮನಕ್ಕೆ ಬಂದಿದೆ. ಈ ಪರ್ಸಿನಲ್ಲಿ 10 ಸಾವಿರಕ್ಕೂ ಮಿಕ್ಕಿದ ನಗದು ಹಣ, ಇತರ ಕೆಲ ಮೌಲ್ಯಯುತ ದಾಖಲೆಗಳು, ಆಧಾರ್ ಕಾರ್ಡ್, ಎಟಿಎಂ ಕಾರ್ಡ್, ಪಾನ್ ಕಾರ್ಡ್, ಚಾಲನಾ ಪರವಾನಿಗೆ ಇತ್ಯಾದಿಗಳಿತ್ತು. ಆದರೆ ಯಾವುದೇ ದಾಖಲೆಗಳಲ್ಲೂ ಸಂಬಂಧಪಟ್ಟವರ ಮೊಬೈಲ್ ಸಂಖ್ಯೆ ಕಂಡು ಬರಲಿಲ್ಲ. ಈ ಸಂಬಂಧ ರಿಕ್ಷಾದಲ್ಲಿ ಬಂದಿದ್ದ ವ್ಯಕ್ತಿಗಳನ್ನು ಸ್ಥಳೀಯವಾಗಿ ಸತ್ತಾರ್ ಹುಡುಕಾಡಿದರೂ ಎಲ್ಲಿಯೂ ಕಂಡು ಬಾರದ ಹಿನ್ನಲೆಯಲ್ಲಿ ನೇರವಾಗಿ ಬಿ.ಸಿ. ರೋಡಿನಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಸಹದೇವ್ ಅವರ ಬಳಿ ವಿಷಯ ಪ್ರಸ್ತಾಪಿಸಿ ಇಬ್ಬರು ಜೊತೆಯಾಗಿ ಪರ್ಸ್ ವಾರೀಸುದಾರರಿಗೆ ಹುಡುಕಾಡಿದಾಗ ಇಬ್ಬರು ವ್ಯಕ್ತಿಗಳು ಬಿ.ಸಿ. ರೋಡಿನ ಮಣಪ್ಪುರಂ ಫೈನಾನ್ಸ್‍ನಲ್ಲಿ ಕಂಡು ಬಂದಿದ್ದಾರೆ. ಈ ಸಂದರ್ಭ ರಿಕ್ಷಾದಲ್ಲಿ ದೊರೆತ ಪರ್ಸಿನ ಬಗ್ಗೆ ಗುರುತು ಪರಿಚಯ ವಿಚಾರಿಸಿ ಮನವರಿಕೆಯಾದ ಬಳಿಕ ಪರ್ಸನ್ನು ಪೊಲೀಸ್ ಸಿಬ್ಬಂದಿ ಸಹದೇವ್ ಅವರ ಸಮ್ಮುಖದಲ್ಲಿ ಸತ್ತಾರ್ ಅವರು ವಾರಸುದಾರರಾದ ಅಸ್ಸಾಂ ನಿವಾಸಿ ಆರಿಫ್ ಅವರಿಗೆ ಹಸ್ತಾಂತರಿಸಿದರು.
ಸತ್ತಾರ್ ನೇತ್ರಾವತಿ ನದಿಯಲ್ಲಿ ಮುಳುಗುತ್ತಿದ್ದ ಹಲವರನ್ನು ರಕ್ಷಿಸಿ ನೇತ್ರಾವತಿ ವೀರ ಎಂಬ ಬಿರುದನ್ನೂ ಈ ಹಿಂದೆ ಪಡೆದುಕೊಂಡಿದ್ದು, ಹಲವು ಬಾರಿ ತನ್ನ ರಿಕ್ಷಾದಲ್ಲಿ ಬಿಟ್ಟುಹೋದ ಮೌಲ್ಯಯುತ ಸಾಮಾಗ್ರಿಗಳನ್ನು ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದರು. ಈ ಬಗ್ಗೆ ನಾಡಿನ ಹಲವು ಮಾಧ್ಯಮಗಳು ಸಚಿತ್ರ ವರದಿಗಳನ್ನೂ ಬಿತ್ತರಿಸಿತು. ಇದೀಗ ಮತ್ತೆ ಸತ್ತಾರ್ ತನ್ನ ಪ್ರಾಮಾಣಿಕತೆಯನ್ನು ಮುಂದುವರಿಸಿರುವ ಬಗ್ಗೆ ಸ್ಥಳೀಯವಾಗಿ ಸಾರ್ವತ್ರಿಕ ಪ್ರಶಂಸೆಗೆ ಪಾತ್ರವಾಗಿದೆ.
ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ (ಎಚ್ ಎರ್ ಎಸ್) ಇದರ ಸಂಚಾಲಕರಾಗಿರುವ ಸತ್ತಾರ್ ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ಇದರ ರಿಕ್ಷಾ ಯೂನಿಯನ್ ಸದಸ್ಯರೂ ಆಗಿರುತ್ತಾರೆ.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...