Monday, April 8, 2024

ಪ್ರಚಾರದ ತೆವಳಿಗೆ ಮಿಥುನ್ ರೈ ಹೇಳಿಕೆ, ಸಿಎಂ ಯೋಗಿ ನಿಂದನೆಗೆ ಬಿಜೆಪಿ ಮುಖಂಡ ಜನಾರ್ಧನ ಅರ್ಕುಳ ಖಂಡನೆ

ಮಂಗಳೂರು: ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ಮಂಗಳೂರಿನ ಕದ್ರಿ ಜೋಗಿ ಮಠಕ್ಕೆ ಹಲವಾರು ವರ್ಷಗಳ ಧಾರ್ಮಿಕ ನಂಟು ಇದೆ.
ಆದರೆ ಕೇವಲ ಪ್ರಚಾರದ ತೆವಳು ಮತ್ತು ಒಂದು ಸಮುದಾಯ ಓಲೈಕೆಗಾಗಿ ಹವಣಿಸುತ್ತಿರುವ ಇಲ್ಲಿನ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಿಥುನ್ ರೈ ಏಕವಚನದಲ್ಲಿ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ.
ಸಿಎಂ ಯೋಗಿ ಮಂಗಳೂರಿಗೆ ಬಂದರೆ ಅವರ ಮುಖಕ್ಕೆ ಮಸಿ ಬಳಿಯುತ್ತೇನೆ ಎಂಬ ಅವರ ಹೇಳಿಕೆ ತೀರಾ ಬಾಲಿಶತನ ಮತ್ತು ಅವಿವೇಕತನದಿಂದ ಕೂಡಿದೆ. ಇಂತಹ ಹೇಳಿಕೆ ಸಮಸ್ತ ಹಿಂದೂ ಸಮಾಜ ಮತ್ತು ನಾಥ ಸಂಪ್ರದಾಯಕ್ಕೆ ಮಾಡಿದ ಅಪಮಾನ. ಈ ಹೇಳಿಕೆ ಖಂಡನೀಯವಾಗಿದ್ದು, ಮುಂದಿನ ದಿನಗಳಲ್ಲಿ ಸಮಸ್ತ ಜಾಗೃತ ಹಿಂದೂ ಸಮಾಜ ಇದಕ್ಕೆ ತಕ್ಕ ಪಾಠ ಕಲಿಸಲಿದೆ ಎಂದು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಜನಾರ್ದನ ಅರ್ಕುಳ ಎಚ್ಚರಿಸಿದ್ದಾರೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...