Wednesday, April 10, 2024

ನಡುಮೊಗರು ಸ.ಹಿ.ಪ್ರಾ.ಶಾಲೆ: ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ: ನಡುಮೊಗರು ಶಾಲೆಗೆ ಎಂಆರ್‌ಪಿಎಲ್ ಅನುದಾನದ ಸಹಕಾರದಲ್ಲಿ ಒಟ್ಟು ೪೨ ಲಕ್ಷ ರೂ. ವೆಚ್ಚದಲ್ಲಿ ನಾಲ್ಕು ತರಗತಿ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್  ನಾಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.


ಅವರು ಸೋಮವಾರ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮ ನಡುಮೊಗರು ಸ.ಹಿ.ಪ್ರಾ.ಶಾಲೆಗೆ ನಿರ್ಮಾಣಗೊಳ್ಳಲಿರುವ ೪ ತರಗತಿ ಕೊಠಡಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಜಿ.ಪಂ ಸದಸ್ಯರಾದ ಬಿ.ಪದ್ಮಶೇಖರ್ ಜೈನ್, ರವೀಂದ್ರ ಕಂಬಳಿ, ಶಿಕ್ಷಣ ಸಂಪನ್ಮೂಲ ಕೇಂದ್ರದ ಪ್ರಭಾರ ಸಮನ್ವಯಾಽಕಾರಿ ರಾಘವೇಂದ್ರ ಬಲ್ಲಾಳ್, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಡುಮೊಗರುಗುತ್ತು ಶಿವರಾಮ ಶೆಟ್ಟಿ ಕೆ.ಎನ್., ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಮುಖರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಚಿದಾನಂದ ರೈ, ಸಂಪತ್ ಕುಮಾರ್ ಶೆಟ್ಟಿ ಮುಂಡ್ರೇಲ್‌ಗುತ್ತು, ಬೊಳ್ಳುಕಲ್ಲು ನಾರಾಯಣ ಪೂಜಾರಿ, ಆದಂ ಕುಂಞಿ, ಮುಖ್ಯ ಶಿಕ್ಷಕ ಚಂದ್ರ.ಕೆ., ಸಾಯಿ ಗಿರಿಧರ್ ಶೆಟ್ಟಿ, ಧನಂಜಯ ಶೆಟ್ಟಿ ಎನ್., ಶಾಂತಪ್ಪ ಪೂಜಾರಿ ಹಟದಡ್ಕ, ಶಾಲಾ ಶಿಕ್ಷಕ ವೃಂದ, ಹಳೆವಿದ್ಯಾರ್ಥಿ ಸಂಘ, ಶಾಲಾಭಿವೃದ್ಧಿ ಸಮಿತಿ ಸದಸ್ಯರು,  ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕ ಮಧುಸೂದನ್ ಸ್ವಾಗತಿಸಿದರು. ಶಿಕ್ಷಕ ಸಂದೇಶ್ ಕಾರ್ಯಕ್ರಮ ನಿರೂಪಿಸಿದರು.

More from the blog

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...