Wednesday, April 10, 2024

ದೇಶದ ಜನತೆ ಸ್ವಚ್ಚ ಭಾರತದ ಹೆಸರಿನಲ್ಲಿ ಸ್ವಚ್ಚತೆ ಮಾಡುತ್ತಿದ್ದರೆ, ಪ್ರಧಾನ ಮಂತ್ರಿಗಳು ಖಾಸಗೀಕರಣದ ಹೆಸರಿನಲ್ಲಿ ದೇಶದ ಖಜಾನೆ ಖಾಲಿ ಮಾಡುತ್ತಿದ್ದಾರೆ: ರವಿಕಿರಣ್ ಆರೋಪ

ಬಂಟ್ವಾಳ : ದೇಶದ ಜನತೆ ಸ್ವಚ್ಛ ಭಾರತದ ಹೆಸರಿನಲ್ಲಿ ಸ್ವಚ್ಛತೆ ಮಾಡುತ್ತಿದ್ದರೆ, ಪ್ರಧಾನ ಮಂತ್ರಿಗಳು ಖಾಸಗೀಕರಣದ ಹೆಸರಿನಲ್ಲಿ ದೇಶದ ಖಜಾನೆಯನ್ನೇ ಗುಡಿಸಿ ಖಾಲಿ ಮಾಡಿದ್ದಾರೆ ಎಂದು ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಆರೋಪಿಸಿದ್ದಾರೆ.


ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆಯ ಪ್ರಯುಕ್ತ ಬಂಟ್ವಾಳ ‌ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ‌ಆಶ್ರಯದಲ್ಲಿ ಮಾಜಿ ‌ಸಚಿವ ಬಿ.ರಮಾನಾಥ ರೈ ಯವರ ನೇತೃತ್ವದಲ್ಲಿ ಇಂದು (ಅ.31) ಬಿ.ಸಿ.ರೋಡಿನ ರಂಗೋಲಿ‌ ಸಭಾಂಗಣದಲ್ಲಿ ಆಯೋಜಿಸಲಾದ ಮಾಜಿ ಗೇಣಿದಾರರ ಸಮಾವೇಶವನ್ನುದ್ದೇಶಿಸಿ‌ ಮಾತನಾಡಿದರು.
ಅನೇಕ ಸಮಸ್ಯೆಗಳನ್ನು ಸರ್ಕಾರವೇ ಸೃಷ್ಟಿ ಮಾಡುತ್ತಿದ್ದು, ಕೃಷಿ ಕಾರ್ಮಿಕರಿಗೆ ಸಮಸ್ಯೆಯಾಗುವ ರೀತಿಯಲ್ಲಿ ಸರ್ಕಾರಗಳು ನಿರ್ಧಾರ ಕೈಗೊಂಡು, ಕಾನೂನು ರೂಪಿಸುತ್ತಿದೆ. ಇಂತಹ ಕಾಲ ಘಟ್ಟದಲ್ಲಿ ಸರ್ಕಾರದ ಸ್ಟೇಟ್ ಮೆಂಟ್ ಗಳ ಬಗ್ಗೆ ನಾವು ತಲೆ ಕೆಡಿಸಿಕೊಳ್ಳದೆ, ನಮ್ಮ ಸ್ಟೇಟಸ್ ಬಗ್ಗೆ ಹೆಚ್ಚು ಗಮನಹರಿಸಬೇಕಿದೆ ಎಂದರು. ಖಾಸಗೀಕರಣದ ಕಾಯಿದೆಗಳಿಂದ ಮಾನವ ಹಕ್ಕುಗಳಿಗೆ ಚ್ಯುತಿ ಎದುರಾಗಿದೆ ಎಂದ ಅವರು, ಎಪಿಎಂಸಿ ಕಾಯ್ದೆಯ ಮೂಲಕ ಎಪಿಎಂಸಿ ಯನ್ನು ಮುಚ್ಚುವ ಷಡ್ಯಂತ್ರ ನಡೆಯುತ್ತಿದೆ. ಪ್ರಜಾಪ್ರಭುತ್ವವೇ ನಮಗೆ ದೊಡ್ಡ ಗ್ರಂಥವಾಗಿದ್ದು, ಸಮಾನತೆಯ ಪ್ರಜಾಪ್ರಭುತ್ವ ವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಧ್ವನಿಯೆತ್ತಬೇಕಾಗಿದೆ ಎಂದು ಹೇಳಿದರು.


ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನೇಕ ಚಳುವಳಿಗಳ ಪರಿಣಾಮವಾಗಿ ಇಂದಿರಾ ಗಾಂಧಿ ಸರ್ಕಾರ ಭೂ ಮಸೂದೆ ಕಾಯ್ದೆ ಜಾರಿಗೆ ಬಂದಿತ್ತು. ಇದರಿಂದ ಯಾವುದೇ ಬಡವರಿಗೆ ಅನ್ಯಾಯವಾಗಿಲ್ಲ. ಆದರೆ ಈ ಐತಿಹಾಸಿಕ ಕಾಯ್ದೆಯನ್ನು ವಿರೋಧಿಸಿದವರ ಬಗ್ಗೆ ಇನ್ನೂ ಎಚ್ಚರ ವಹಿಸಬೇಕಾದ ಅಗತ್ಯವಿದೆ ಎಂದರು. ತುರ್ತು ಪರಿಸ್ಥಿತಿಯಿಂದ ಯಾವುದೇ ಬಡವರು, ದುರ್ಬಲರು ಜೈಲಿಗೆ ಹೋಗಿಲ್ಲ, ಜನತೆಯ ಹಕ್ಕು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಅವರು, ದೇಶದ ರಕ್ಷಣೆಯ ವಿಚಾರದಲ್ಲೂ ಯಾರ ಜೊತೆಯೂ ರಾಜಿ ಮಾಡಿಕೊಂಡವರಲ್ಲ. ಆದರೆ ಇವರ ಯೋಜನೆಗಳಿಂದ ಲಾಭ ಪಡೆದುಕೊಂಡವರೇ ಅವರ ವಿರುದ್ದ ಬೊಬ್ಬೆ ಹಾಕುತ್ತಿದ್ದಾರೆ. ದೇಶದ ಏಕತೆ ಹಾಗೂ ಸಾರ್ವಭೌಮತೆಯನ್ನು ಉಳಿಸುವ ನಿಟ್ಟಿನಲ್ಲಿ ಇಂದಿರಾ ಗಾಂಧಿಯವರ ಸಾಧನೆ, ಕೊಡುಗೆಗಳು ಸದಾ ಸ್ಮರಣೀಯ ಎಂದರು.


ಜಿ.ಪಂ.ಸದಸ್ಯರಾದ ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ‌ಶೆಟ್ಟಿ, ಮಂಜುಳಾ ಮಾಧವ ಮಾವೆ, ಎಂ.ಎಸ್.ಮಹಮ್ಮದ್, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ ತಾ.ಪಂ‌.ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ ವೇದಿಕೆಯಲ್ಲಿದ್ದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸ್ವಾಗತಿಸಿ, ಪಾಣೆಮಂಗಳೂರು‌ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ವಂದಿಸಿದರು. ಕೊಡಾಜೆ ಬಾಲಕೃಷ್ಣ ಆಳ್ವ ಕಾರ್ಯಕ್ರಮ‌ ನಿರ್ವಹಿಸಿದರು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...