Wednesday, October 25, 2023

ಗೃಹರಕ್ಷಕ ದಳದ ಬೆಳ್ತಂಗಡಿ ಘಟಕದಲ್ಲಿ ಆಯುಧ ಪೂಜೆ ಹಾಗೂ ಗೃಹರಕ್ಷಕರಿಗೆ ಆಹಾರದ ಕಿಟ್ ವಿತರಣೆ

Must read

ಬೆಳ್ತಂಗಡಿ: ಗೃಹರಕ್ಷಕ ದಳದ ಬೆಳ್ತಂಗಡಿ ಘಟಕದಲ್ಲಿ ಆಯುಧ ಪೂಜೆಯನ್ನು ನೆರವೇರಿಸಲಾಯಿತು.

ಗೃಹರಕ್ಷಕರಿಗೆ ಆಹಾರದ ಕಿಟ್ ವಿತರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ, ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಗೃಹರಕ್ಷಕ ಸಿಬ್ಬಂದಿ ಸೈನಿಕರಂತೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ|| ಮುರಲೀ ಮೋಹನ್ ಚೂಂತಾರು ಅವರು ಬರೆದಿರುವ ’ಕೋವಿಡ್-19 ಆರೋಗ್ಯ ಮಾರ್ಗದರ್ಶಿ ಸಂಕಲ್ಪ-2020’ ಮತ್ತು ’ರಕ್ತದಾನ ಜೀವದಾನ’ ಪುಸ್ತಕಗಳನ್ನು ಹಾಗೂ ಸ್ಯಾನಿಟೈಸರ್‌ಗಳನ್ನು ಗಹರಕ್ಷಕ ಸಿಬ್ಬಂದಿಗಳಿಗೆ ಮತ್ತು ಅತಿಥಿಗಳಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಕೆ. ವಸಂತ ಬಂಗೇರ, ಗೃಹರಕ್ಷಕ ದಳದ ಕಮಾಂಡೆಂಟ್ ಡಾ|| ಮುರಲೀಮೋಹನ ಚೂಂತಾರು, ಉಪ ಸಮಾದೇಷ್ಟರಾದ ರಮೇಶ್, ಅಗ್ನಿಶಾಮಕ ಠಾಣಾಧಿಕಾರಿ ಕ್ಲೇವಿಯಸ್ ಡಿ’ಸೋಜಾ, ಗೃಹರಕ್ಷಕ ದಳದ ಪ್ರಭಾರ ಘಟಕಾಧಿಕಾರಿ ಜಯಾನಂದ ಉಪಸ್ಥಿತರಿದ್ದರು.
ಗೃಹರಕ್ಷಕ ದಳದ ಎಲ್ಲ ಸಿಬ್ಬಂದಿ, ಬೆಳ್ತಂಗಡಿ ಪೊಲೀಸ್ ಠಾಣೆ ಮತ್ತು ಅಗ್ನಿಶಾಮಕ ಠಾಣೆ, ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು. ರಾಜೇಶ್ ಶಾಂತಿ ಇಂದಬೆಟ್ಟು ವೈದಿಕ ವಿಧಿವಿಧಾನ ನೆರವೇರಿಸಿದರು.

More articles

Latest article