Monday, April 8, 2024

ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಮಾನ್ಯತೆ ಪಡೆದ ಪಡುಬಿದ್ರೆ ಬೀಚ್

ಉಡುಪಿ : ಜಿಲ್ಲೆಯ ಪಡುಬಿದ್ರೆಯ ಕಡಲ ತೀರಗಳು ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಮಾನ್ಯತೆ ಪಡೆದಿವೆ ಎಂದು ವರದಿಯಾಗಿದೆ.
ದೇಶದಲ್ಲಿ ಒಟ್ಟು ಹನ್ನೆರಡು ಕಡಲ ತೀರಗಳು ಬ್ಲೂ ಫ್ಲಾಗ್ ಮಾನ್ಯತೆ ಪಡೆದಿದೆ. ಈ ಪೈಕಿ ಕರ್ನಾಟಕದಲ್ಲಿ ಎರಡು ಕಡಲ ತಡಿಗಳು ಆಯ್ಕೆಯಾಗಿವೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಕಾಸರಗೋಡು ಹಾಗೂ ಉಡುಪಿಯ ಪಡುಬಿದ್ರೆಯ ಕಡಲ ತೀರಗಳು.
ಪಡುಬಿದ್ರೆಯ ಬೀಚ್ ತನ್ನ ಮೊದಲ ಪ್ರಯತ್ನದಲ್ಲೇ ಅಂತರಾಷ್ಟ್ರೀಯ ಮಾನ್ಯತೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಇಲ್ಲಿ ಪ್ರವಾಸಿಗರು ಕುಳಿತುಕೊಳ್ಳುವ ಆಸನಗಳು ಮಾತ್ರವಲ್ಲದೆ, ಕುಡಿಯುವ ನೀರು, ಮಕ್ಕಳ ಆಟಿಕೆಗಳು, ಜೀವರಕ್ಷಕ ಸಿಬ್ಬಂದಿ ಹಾಗೂ ಮುಖ್ಯವಾಗಿ ಕಡಲತೀರದ ಸ್ವಚ್ಛತೆ ಉತ್ತಮ ಗುಣಮಟ್ಟದಿಂದ ಕೂಡಿದೆ.

ಬ್ಲೂ ಫ್ಲಾಗ್ ಎಂದರೇನು?

ಕಡಲ ತೀರ (ಬೀಚ್) ಗಳಲ್ಲಿನ ಸ್ವಚ್ಚತೆ, ಪರಿಸರ ಸ್ನೇಹಿ ವಾತಾವರಣ ಮತ್ತಿತರೆ ಅಂಶಗಳನ್ನು ಪರಿಗಣಿಸಿ ಪರಿಸರ ಶಿಕ್ಷಣಕ್ಕಾಗಿ ವೇದಿಕೆ’ (ಎಫ್.ಇ.ಇ) ಈ ಬ್ಲೂ ಫ್ಲಾಗ್ ಪ್ರಮಾಣ ಪತ್ರ ನೀಡುತ್ತದೆ. ಇಂತಹಾ ಪ್ರಮಾಣಪತ್ರ ಪಡೆದ ಬೀಚ್ ಗಳಲ್ಲಿ ನೀಲಿ ಬಣ್ಣದ ಧ್ವಜವನ್ನು ಆರೋಹಣ ಮಾಡಲಾಗುವುದು. ವಿದೇಶಗಳಲ್ಲಿ ಇಂತಹಾ ಪ್ರಮಾಣಪತ್ರ ಪಡೆದ ಬೀಚ್ ಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹಾಗಾಗಿ ಭಾರತೀಯ ಪ್ರವಾಸೋದ್ಯಮ ಅಭಿವೃದ್ದಿ ದೃಷ್ಟಿಯಿಂದ ಇಂತಹಾ ಪ್ರಮಾಣಪತ್ರ ಪಡೆಯುವುದು ಅತ್ಯಂತ ಪ್ರಮುಖವಾಗಿದೆ.

More from the blog

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದ್ದು, ಅದರಂತೆ, ಏಪ್ರಿಲ್ 14 ರಂದು ದ.ಕ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ.. ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...