Sunday, April 7, 2024

ರಂತಡ್ಕ : ನವೀಕೃತ ಮಸೀದಿ ಉದ್ಘಾಟನೆ ಹಾಗೂ ಖಾಝಿ ಸ್ವೀಕಾರ

ಬಿ.ಸಿ.ರೋಡ್ : ಬೋಳಿಯಾರು ಸಮೀಪದ ರಂತಡ್ಕ ಬದ್ರಿಯ ಜುಮಾ ಮಸೀದಿ ಇದರ ನವೀಕೃತ ಮಸೀದಿ ಉದ್ಘಾಟನೆ ಹಾಗೂ ಖಾಝಿ ಸ್ವೀಕಾರ ಕಾರ್ಯಕ್ರಮವು ಭಾನುವಾರ ನಡೆಯಿತು.

ಸಮಸ್ತ ಕೇಂದ್ರ ಮುಶಾವರ ಸದಸ್ಯರೂ, ದ.ಕ.ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹಮದ್ ಮುಸ್ಲಿಯಾರ್ ನವೀಕೃತ ಮಸೀದಿಯ ಉದ್ಘಾಟನೆ ಹಾಗೂ ವಕ್ಫ್ ನೆರವೇರಿಸಿದರು. ರಂತಡ್ಕ ಬಿ.ಜೆ.ಎಂ.ಅದ್ಯಕ್ಷ ಎಸ್.ಅಬ್ದುಲ್ ಖಾದರ್ ಅದ್ಯಕ್ಷತೆ ವಹಿಸಿದ್ದರು.
ರಂತಡ್ಕ ಖತೀಬ್ ಕೆ.ಬಿ.ಅಬ್ದುಲ್ ಖಾದರ್ ದಾರಿಮಿ ಪ್ರಸ್ಥಾವನೆಗೈದರು, ನಂದಾವರ ಖತೀಬ್ ಸಿದ್ದೀಕ್ ದಾರಿಮಿ ಖಾಝಿ ಸ್ವೀಕಾರದ ಅಗತ್ಯ ಮತ್ತು ಮಹತ್ವದ ಬಗ್ಗೆ ವಿವರಿಸಿದರು.


ಇದೇ ವೇಳೆ ಕೆ.ಪಿ.ಇರ್ಶಾದ್ ದಾರಿಮಿ ಮಿತ್ತಬೈಲು ಅವರು ಶೈಖುನಾ ತ್ವಾಖಾ ಅಹಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರನ್ನು ಬದ್ರಿಯ ಜುಮಾ ಮಸೀದಿ ರಂತಡ್ಡ ಇದರ ಖಾಝಿಯನ್ನಾಗಿ ಜಮಾಅತಿನ ಸರ್ವರ ಪರವಾಗಿ ಘೋಷಣೆ ಮಾಡಿದರು.
ಹನೀಫ್ ಹಾಜಿ ಮಂಗಳೂರು, ಅಬ್ದುಲ್ ರಝಾಕ್ ಹಾಜಿ ಬಿ.ಸಿ.ರೋಡ್, ಹಾಜಿ ಪಕೀರಬ್ಬ ಮಾಸ್ಟರ್, ಸಮದ್ ಹಾಜಿ ಮಂಗಳೂರು,
ಹೈದ್ರೋಸ್ ಕುದ್ರೋಳಿ, ಮಜೀದ್ ಪೈಝಿ ನಂದಾವರ, ಕೋಟೆಕ್ಕಣಿ ಖತೀಬ್ ಅನ್ಸಾರುದ್ದೀನ್ ಪೈಝಿ, ರಂತಡ್ಕ ಸದರ್ ಮುಅಲ್ಲಿಂ ಮುಹಮ್ಮದ್ ನವಾಝ್ ಪೈಝಿ, ರಂತಡ್ಕ ಬಿ.ಜೆ.ಎಂ. ಉಪಾದ್ಯಕ್ಷ ಆಸಿಫ್, ಕೋಶಾಧಿಕಾರಿ ಹಸನಬ್ಬ ಹಾಜಿ, ಜೊತೆ ಕಾರ್ಯದರ್ಶಿ ಮುಹಮ್ಮದ್ ಅಶ್ರಫ್, ನುಸ್ರತುಲ್ ಮಸಾಕೀನ್ ಕಮಿಟಿ ಅದ್ಯಕ್ಷ ಮುಹಮ್ಮದ್ ಮಸೂದ್, ಎಸ್.ವೈ.ಎಸ್.ಅದ್ಯಕ್ಷ ಎಂ.ಆರ್.ಮುಹಮ್ಮದ್, ಎಸ್ಕೆಎಸ್ಸೆಸ್ಸೆಫ್ ಅದ್ಯಕ್ಷ ಇಸಾಕ್ ಮೊದಲಾದವರು ಭಾಗವಹಿಸಿದ್ದರು.

ಮಸೀದಿ ಪ್ರಧಾನ ಕಾರ್ಯದರ್ಶಿ ಆರ್.ಎಸ್.ಇಬ್ರಾಹಿಂ ಸ್ವಾಗತಿಸಿ, ವಂದಿಸಿದರು. ಮುಝಮ್ಮಿಲ್ ಕಿರಾಅತ್ ಪಠಿಸಿದರು.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...