Saturday, April 6, 2024

ಜೀವಗಳನ್ನು ಅಪಾಯಕ್ಕೆ ಒಡ್ಡಿ ಹಬ್ಬ ಆಚರಿಸಲು ಯಾವ ಧರ್ಮವೂ ಹೇಳುವುದಿಲ್ಲ: ಹರ್ಷವರ್ಧನ್‌

ನವದೆಹಲಿ: ಯಾವ ಧರ್ಮವೂ ಜೀವಗಳನ್ನು ಅಪಾಯಕ್ಕೆ ಒಡ್ಡಿ ಹಬ್ಬ ಆಚರಿಸಬೇಕು ಎಂದು ಹೇಳುವುದಿಲ್ಲ, ನೀವು ನಿಮ್ಮ ಮನೆಯಲ್ಲೇ ಇದ್ದು ದೇವರನ್ನು ಪ್ರಾರ್ಥಿಸಬಹುದು ಎಂಬುದಾಗಿ ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್‌ ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ ಅನೇಕ ಹಬ್ಬ-ಹರಿದಿನಗಳು ಬರಲಿದ್ದು, ಆ ನೆಪದಲ್ಲಿ ಜನರು ಗುಂಪುಗೂಡಿ ಒಂದೆಡೆ ಸೇರಿ ಕೊರೊನಾ ಸೋಂಕನ್ನು ಆಹ್ವಾನಿಸದಂತೆ ತಡೆಯುವ ನಿಟ್ಟಿನಲ್ಲಿ ಮನೆಯಲ್ಲಿ ಇದ್ದು ಹಬ್ಬ ಆಚರಿಸಿ ಎಂದು ಸಲಹೆ ನೀಡಿದ್ದಾರೆ.

ಜೀವಗಳನ್ನು ಅಪಾಯಕ್ಕೆ ತಳ್ಳಿ ಹಬ್ಬಗಳನ್ನು ಆಚರಿಸಬೇಕು ಎಂದು ಯಾವ ಧರ್ಮವೂ ಹೇಳುವುದಿಲ್ಲ. ಪ್ರಸ್ತುತ ನಮ್ಮೆಲ್ಲರಿಗೂ ಕೊರೊನಾ ಸೋಂಕನ್ನು ನಾಶ ಮಾಡುವುದು ಒಂದೇ ಗುರುಯಾಗಿದ್ದು, ಅದನ್ನೇ ನಮ್ಮ ಧರ್ಮವೆಂದು ಭಾವಿಸೋಣ. ಮನೆಗಳಲ್ಲೇ ಇದ್ದು ಕುಟುಂಬ ಸದಸ್ಯರ ಜತೆಗೆ ಹಬ್ಬದ ಸಂಭ್ರಮವನ್ನು ಸವಿಯೋಣ ಎಂದು ಹರ್ಷವರ್ಧನ್‌ ಹೇಳಿದ್ದಾರೆ.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...