Sunday, April 14, 2024

ಕೊರೊನಾ ಮಾರ್ಗಸೂಚಿ ಉಲ್ಲಂಘಿಸುವವರಿಗೆ ಇಂದಿನಿಂದ ದುಬಾರಿ ದಂಡ: ಜಿಲ್ಲಾಧಿಕಾರಿ ಆದೇಶ

ಮಂಗಳೂರು : ಕೊರೊನಾ ಸೊಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದ.ಕ. ಜಿಲ್ಲಾಡಳಿತ ನಿರ್ಧರಿಸಿದ್ದು, ಸೋಮವಾರದಿಂದ (ಅ. 5) ರಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಹಾಕದೆ ಸಿಕ್ಕಿಬಿದ್ದರೆ ಭಾರೀ ಮೊತ್ತದ ದಂಡ ಪಾವತಿಸಬೇಕಾಗುತ್ತದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಕೊರೊನಾ ನಿಯಂತ್ರಣದ ಹಿನ್ನೆಲೆ ಜಿಲ್ಲಾಡಳಿತ ಈಗಾಗಲೇ ಅಧಿಕಾರಿಗಳಿಗೆ ಅಧಿಕೃತ ಸೂಚನೆಗಳನ್ನು ನೀಡಿದೆ. ರಾಜ್ಯ ಸರ್ಕಾರದ ಸೂಚನೆಯಂತೆ, ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ ಜನರಿಗೆ 1,000 ರೂ.ಗಳ ದಂಡ ಮತ್ತು ಇತರ ಸ್ಥಳಗಳಲ್ಲಿ ಮಾಸ್ಕ್‌ ಹಾಕದವರಿಗೆ 500 ರೂ. ವರೆಗೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಈವರೆಗೆ ಮಾಸ್ಕ್‌ ಧರಿಸದವರಿಗೆ 200 ರೂ. ದಂಡ ವಿಧಿಸಲಾಗುತ್ತಿತ್ತು.
ಇನ್ನು ನಗರ ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್ ಸೋಮವಾರದಿಂದ ನಗರ ಪಾಲಿಕೆ ಮಿತಿಯೊಳಗೆ ಮಾಸ್ಕ್‌ ಧರಿಸದವರಿಗೆ ಅಧಿಕ ದಂಡವನ್ನು ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕೊರೊನಾ ಜಾಗೃತಿ ಅಭಿಯಾನವನ್ನು ಆಗಾಗೇ ಕೈಗೊಂಡಿದ್ದರೂ ಕೂಡಾ ಜನರು ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ದಂಡವನ್ನು ಹೆಚ್ಚಿಸಿದೆ. ದಂಡದ ಹೆಚ್ಚಳದಿಂದಾದರೂ ಜನರು ಮಾರ್ಗಸೂಚಿಗಳನ್ನು ಪಾಲಿಸುತ್ತಾರೆ ಎಂಬ ನಿರೀಕ್ಷೆ ಸರ್ಕಾರದ್ದು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...