Saturday, April 6, 2024

ಅಡಿಕೆ ವ್ಯಾಪಾರಿಗೆ ಚೂರಿಯಿಂದ ಇರಿದು 4 ಲಕ್ಷ ರೂ. ದರೋಡೆ

ಪುತ್ತೂರು : ವ್ಯಾಪಾರ ಮುಗಿಸಿ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಚೂರಿ ಇರಿದು ವ್ಯಾಪಾರಿಯ ಬಳಿ ಇದ್ದ 4 ಲಕ್ಷ ರೂ. ಹಣವನ್ನು ದೋಚಿದ ಘಟನೆ ದ.ಕ. ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪೆರ್ನೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಪದೆಬರಿ ನಿವಾಸಿ, ದೀಪಕ್‌ ಶೆಟ್ಟಿ(೪೯) ಕೃಷಿಕರಿಂದ ಅಡಿಕೆ ಖರೀದಿಸಿ ವ್ಯಾಪಾರ ಮಾಡುತ್ತಿದ್ದರು. ಅಡಿಕೆಯನ್ನು ಮಾರಿ ಅದರಿಂದ ದೊರೆತ 4 ಲಕ್ಷ ರೂ. ನಗದಿನೊಂದಿಗೆ ಬೈಕ್‌ನಲ್ಲಿ ಪೆರ್ನೆ ಒಳಗಿನ ರಸ್ತೆಯಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭ ಇನ್ನೊಂದು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ದೀಪಕ್‌ ಶೆಟ್ಟಿಯ ಬೆನ್ನು ಮತ್ತು ಕುತ್ತಿಗೆಗೆ ಇರಿದು ಹಣವನ್ನು ದೋಚಿ ಪರಾರಿಯಾಗಿದ್ದಾರೆ.
ದೀಪಕ್‌ಗೆ ಗಂಭೀರವಾದ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...