Sunday, April 7, 2024

ವಿಶ್ವ ವಿಖ್ಯಾತ ಮೈಸೂರು ದಸರಾ ಗೆ ಚಾಲನೆ

ಮೈಸೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದ್ದು, 2020 ರ ಮೈಸೂರು ದಸರಾ ಮಹೋತ್ಸವವನ್ನು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಪದ್ಮಶ್ರೀ ಡಾ.ಸಿ.ಎನ್. ಮಂಜುನಾಥ್ ಅವರು ಉದ್ಘಾಟಿಸಿದ್ದಾರೆ.
ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಿ ಮಾತನಾಡಿದ ಅವರು, ದಸರಾ ಇತಿಹಾಸದಲ್ಲಿ ಮೊದಲ ಬಾರಿಗೆ ವೈದ್ಯರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಿರುವುದಕ್ಕೆ ಧನ್ಯವಾದ. ಇದು ಕೊರೊನಾ ವಾರಿಯರ್ಸ್ ಗೆ ನೀಡಿದ ಬಹುದೊಡ್ಡ ಗೌರವ. ಇದು ನನ್ನ ಜೀವಿತಾವಧಿಯ ಹೆಮ್ಮೆ ಎಂದು ಭಾವಿಸಿರುವುದಾಗಿ ಹೇಳಿದರು. ಕೊರೊನಾದಿಂದ ರಕ್ಷಣೆಗೆ ಹೋರಾಡಿ ಮೃತಪಟ್ಟವರನ್ನು ಹುತಾತ್ಮರೆಂದು ಕರೆಯಬೇಕು. ಈವರೆಗೆ 500 ಕ್ಕೂ ಹೆಚ್ಚು ವೈದ್ಯರು 700 ಕ್ಕೂ ಹೆಚ್ಚು ನರ್ಸ್ ಗಳು ಸಾವೀಗೀಡಾಗಿದ್ದಾರೆ. ಅವರಿಗೆ ಹುತಾತ್ಮರ ಸ್ಥಾನಮಾನ ನೀಡಬೇಕು ಎಂದರು. ಹುತಾತ್ಮ ಯೋಧರಿಗೆ ಸಿಗುವ ಸೌಲಭ್ಯಗಳು ಅವರ ಕುಟುಂಬಗಳಿಗೂ ಸಿಗಬೇಕು ಎಂದು ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಮಂಜುನಾಥ್ ಹೇಳಿದ್ದಾರೆ.
ಮೈಸೂರು ದಸರಾ ಉದ್ಘಾಟನೆಯ ನಂತರ ಆರು ಮಂದಿ ಕೊರನಾ ವಾರಿಯರ್ಸ್ ಗೆ ಸನ್ಮಾನ ಮಾಡಲಾಯಿತು. ಪೌರಕಾರ್ಮಿಕರಾದ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ಸ್ಪಾಫ್ ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆಯಾದ ನೂರ್ ಜಾನ್ , ಪೊಲೀಸ್ ಕಾನ್ಸ್ ಸ್ಟೇಬಲ್ ಕುಮಾರ್ ಪಿ. ಸಾಮಾಜಿಕ ಕಾರ್ಯಕರ್ತ ಅಯ್ಯೂಬ್ ಅಹ್ಮದ್ ಗೆ ಗಣ್ಯರ ಸಮ್ಮುಖದಲ್ಲಿ ಸನ್ಮಾನ ಮಾಡಲಾಯಿತು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...