Tuesday, April 9, 2024

ವಿಟ್ಲ: ವಿದ್ಯುತ್ ಶಾಕ್‌ನಿಂದ ಕಾರ್ಮಿಕ ಮೃತ್ಯು

ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ದೇವಸ್ಯ ಎಂಬಲ್ಲಿ ವಿದ್ಯುತ್ ಶಾಕ್ ತಗುಲಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
ಕರೋಪಾಡಿ ಗ್ರಾಮದ ಚೆಲ್ಲಂಗಾರು ನಿವಾಸಿ ಗೋವಿಂದ ನಾಯ್ಕರ ಪುತ್ರ, ಮಂಗಿಲಪದವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ವಿಶ್ವನಾಥ(36) ಮೃತ ದುರ್ದೈವಿಯಾಗಿದ್ದು, ಅವರು ಕಳೆದ ಕೆಲಸಮಯದಿಂದ ವಿಟ್ಲ ಕಸಬ ಗ್ರಾಮದ ದೇವಸ್ಯ ಎಂಬಲ್ಲಿನ ಅಶ್ವತ್ ಎಂಬವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಅ.6 ರಂದು ರಾತ್ರಿ ವಿಶ್ವನಾಥರವರು ಅಶ್ವತ್‌ರವರ ತೋಟದ ಪಂಪ್ ಶೆಡ್‌ನಲ್ಲಿ ಮೋಟರ್ ಸ್ವಿಚ್ ಹಾಕಲೆಂದು ತೆರಳಿದಾಗ ವಿದ್ಯುತ್ ಬಾರದ ಹಿನ್ನೆಲೆಯಲ್ಲಿ ಅಲ್ಲೇ ಪಕ್ಕದಲ್ಲಿದ್ದ ವಿದ್ಯುತ್ ಕಂಬದಲ್ಲಿದ್ದ ಸರ್ವೀಸ್ ವಯರನ್ನು ಬಿದಿರಿನ ಕೋಲಿನಿಂದ ಸರಿಪಡಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ವಿಟ್ಲದ ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಅವರು ಮೃತಪಟ್ಟಿರುವುದಾಗಿ ಮೃತರ ಸಹೋದರ ವಸಂತ ನಾಯ್ಕ ಅವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...