Saturday, April 20, 2024

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ

 

ನವದೆಹಲಿ : ಕೇಂದ್ರದ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ. ಈ ಬಗ್ಗೆ ಅವರ ಪುತ್ರ ಚಿರಾಗ್ ಪಾಸ್ವಾನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

74 ವರ್ಷದ ರಾಮ್ ವಿಲಾಸ್ ಪಾಸ್ವಾನ್ ಅವರು ಕೆಲವು ದಿನಗಳಿಂದ ಅನಾರೋಗ್ಯದಲ್ಲಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಾಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ, ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ, ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪಾಸ್ವಾನ್ ಅವರು ಬರೋಬ್ಬರಿ ಎಂಟು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಬಾರಿ ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿ ಸೇವೆಯಲ್ಲಿದ್ದರು. ಅಲ್ಲದೆ, ಲೋಕ್ ಜನಶಕ್ತಿ ಪಾರ್ಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಲೋಕ್ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ಮುಖ್ಯಸ್ಥ, ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರೀಯರಾಗಿದ್ದರು. ಎನ್ ಡಿಎ ಮೈತ್ರಿಕೂಟದಲ್ಲಿದ್ದ ಎಲ್ ಜೆಪಿ ಪಕ್ಷದಿಂದ ಪಾಸ್ವಾನ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

More from the blog

ಸೈಕಲ್ ರಿಪೇರಿಗೆ ಹಟ : ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ...

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...