Saturday, April 6, 2024

ಪಣೋಲಿಬೈಲು ದೈವಸ್ಥಾನದ ಅನುವಂಶಿಕ ಎರಡನೇ ಅರ್ಚಕ ರಮೇಶ್‌ ಮೂಲ್ಯ ವಿಧಿವಶ

ಬಂಟ್ವಾಳ: ಪಣೋಲಿಬೈಲು ದೈವಸ್ಥಾನದ ಅನುವಂಶಿಕ ಎರಡನೇ ಅರ್ಚಕ ರಮೇಶ್‌ ಮೂಲ್ಯ (55)ಅವರು ಇಂದು ಬೆಳಿಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಅವರು ಕಳೆದ ಎರಡು ವಾರಗಳಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ನಿನ್ನೆ ರಾತ್ರಿಯಿಂದ ಚಿಕಿತ್ಸೆಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ, ಹಿಂದೂ ಸಂಘಟನೆಯ ಕಾರ್ಯಕರ್ತ ಲೋಹಿತ್ ಪಣೋಲಿಬೈಲು ಸಹಿತ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ರಮೇಶ್ ಅವರ ಪಾರ್ಥಿವ ಶರೀರವನ್ನು ಅವರ ಪಣೋಲಿಬೈಲಿನಲ್ಲಿರುವ ಮನೆಗೆ 10.30 ರ ವೇಳೆ ತರಲಿದ್ದು ಬಳಿಕ ಕಂಚಿನಡ್ಕ ಪದವಿನ ಸ್ಮಶಾನ ಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯುತ್ತದೆ ಎಂದು ಅವರ ಮಗ ಲೋಹಿತ್ ಪಣೋಲಿಬೈಲು ತಿಳಿಸಿದ್ದಾರೆ.

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಕಡಬ: ಚೇರು ಪ್ರದೇಶದ ಮನೆಗೆ ಶಂಕಿತರ ಭೇಟಿ : ಊಟ ಮಾಡಿ, ಸಾಮಗ್ರಿ ಪಡೆದು ತೆರಳಿದ ಶಂಕಿತರು

ಸುಬ್ರಹ್ಮಣ್ಯ: ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿರುವ ವಿಷಯ ಶುಕ್ರವಾರ ಸಂಜೆ ವೇಳೆಗೆ ಬೆಳಕಿಗೆ ಬಂದಿದೆ. ತಾಲೂಕಿನ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...