Saturday, April 6, 2024

ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷ ಜಯ ಸಿ. ಸುವರ್ಣ ನಿಧನ

ಮಂಗಳೂರು: ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷ, ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮೂಲ್ಕಿ ಜಯ ಸಿ. ಸುವರ್ಣ (82) ಇಂದು ಅ.21 ರಂದು ಬೆಳಿಗ್ಗೆ ಮುಂಬೈಯಲ್ಲಿ ನಿಧನರಾಗಿದ್ದಾರೆ.
ಮುಂಬಯಿಯಲ್ಲಿ ಹೊಟೇಲ್ ಉದ್ಯಮಿಯಾಗಿರುವ ಜಯ ಸಿ.ಸುವರ್ಣ ಅವರು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಮುಂಬಯಿ ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾಗಿದ್ದರು. ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿಯವರ ನಿಕಟವರ್ತಿ, ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದಂತಹ ಕೊಡುಗೈದಾನಿ, ಬಿಲ್ಲವ ಭವನ ಮುಂಬಯಿ ಮತ್ತು ಮಹಾಮಂಡಲ ಭವನ ಮುಲ್ಕಿ ಇದರ ನಿರ್ಮಾತೃ ಆಗಿದ್ದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಪಾರ ಭಕ್ತರಾಗಿರುವ ಇವರು ಕುದ್ರೋಳಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಕ್ರಮ ಸೇರಿದಂತೆ ಪ್ರತಿಯೊಂದು ಕಾರ್ಯಕ್ರಮದಲ್ಲೂ ಮುಂಚೂಣಿಯಲ್ಲಿದ್ದು ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಇಂದು (ಅ.21) ಮಧ್ಯಾಹ್ನ 3 ಗಂಟೆಗೆ ಮುಂಬೈಯಲ್ಲಿ ನಡೆಯಲಿದೆ.
ಮೃತರು ಪತ್ನಿ ಹಾಗೂ ನಾಲ್ವರು ಪುತ್ರರನ್ನು ಅಗಲಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...