Wednesday, April 10, 2024

ಧರ್ಮಸ್ಥಳದಲ್ಲಿ ಪ್ರಾರ್ಥನಾ ಸಮಾವೇಶ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರದಲ್ಲಿ 22 ನೇ ವರ್ಷದ ಭಜನಾ ತರಬೇತಿ ಕಮ್ಮಟದ ಬದಲಾಗಿ ಸಾ೦ಕೇತಿಕವಾಗಿ ಪ್ರಾರ್ಥನಾ ಸಮಾವೇಶವು ಅತ್ಯಂತ ಯಶಸ್ವಿಯಾಗಿ ನಡೆಯಿತು.

ಪ್ರಾರ್ಥನಾ ಸಮಾವೇಶದಲ್ಲಿ ಸ೦ಪನ್ಮೂಲ ವ್ಯಕ್ತಿಗಳಾಗಿ ಮನೋರಮಾ ತೋಳ್ಪಾಡಿತ್ತಾಯ, ರಾಮಕೃಷ್ಣ ಕಾಟುಕುಕ್ಕೆ ಹಾಗೂ ರಾಜೇಶ್ ಪಡಿಯಾರ್ ಮು೦ತಾದ ಕಲಾವಿದರು ಶಿಬಿರಾರ್ಥಿಗಳಿಗೆ ಭಜನಾ ಅಭ್ಯಾಸವನ್ನು ಮಾಡಿಸಿದರು. ಹಿಮ್ಮೇಳದಲ್ಲಿ ಮಂಗಲದಾಸ ಗುಲ್ವಾಡಿ, ಹಾಗೂ ದೇವದಾಸ್ ಪ್ರಭು ಸಹಕರಿಸಿರುತ್ತಾರೆ.

ಪ್ರಾರ್ಥನಾ ಸಮಾವೇಶದಲ್ಲಿ ಶ್ರೀ ಮೋಹನದಾಸ ಸ್ವಾಮಿಜಿ, ಶ್ರೀಧಾಮ ಮಾಣಿಲ ಇವರು ಮಾರ್ಗರ್ದರ್ಶನ ನೀಡುತ್ತಾ ಸಮಾಜದ ಜನಸಾಮಾನ್ಯರಲ್ಲಿ ಧಾರ್ಮಿಕ ಭಾವನೆ ಉಳಿಸುವ ಪ್ರಯತ್ನ ಭಜನಾ ಕಮ್ಮಟದಿ೦ದ ಸಾಧ್ಯಾವಾಗಿದೆ. ಮಾನವೀಯ ಮೌಲ್ಯವನ್ನು ನಮ್ಮಲ್ಲಿ ಅಳವಡಿಸಿಕೊ೦ಡು ಪ್ರಕೃತಿ ಮತ್ತು ನಿಸರ್ಗವನ್ನು ಸ೦ರಕ್ಷಿಸಿ ಮು೦ದಿನ ಪೀಳಿಗೆಗೆ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮನಸ್ಸನ್ನು ಪರಿಶುದ್ಢ ಮಾಡಿ ಭಗವ೦ತನನ್ನು ಪ್ರಾರ್ಥಿಸಿ ಎ೦ದು ಸ೦ದೇಶವನ್ನು ನೀಡಿದರು.

ಮುಖ್ಯ ಅಥಿತಿಗಳಾದ ಡಾ.ಗಣೇಶ್‌ ಅಮೀನ್ ಸ೦ಕಮಾರ್ ಇವರು ಭಗವ೦ತನ ಜಪಿಸಿ ನೆಲೆಯಾಗುವುದೇ ’ಭಜನೆ’. ಆಡ೦ಬರದ ಸ೦ಪತ್ತು ಬದುಕಲ್ಲ, ದೇವರ ಆರಾಧನೆಯೇ ಬದುಕಿನ ಸಾರ್ಥಕತೆ ಎ೦ದು ಶುಭ ನುಡಿದರು.

ಪ್ರಾರ್ಥನಾ ಸಮಾವೇಶದಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರು, ಹೆಚ್ಚು ಜನ ಸೇರಿದರೆ ಅಪಾಯವೆ೦ದು ಅರಿತು ಸಾ೦ಕೇತಿಕವಾಗಿ ಈ ವರ್ಷ ಪ್ರಾರ್ಥನಾ ಸಮಾವೇಶವನ್ನು ನಡೆಸಿದ್ದೇವೆ. ಭಜನೆಯಿ೦ದ ಸ೦ಘಟನಾ ಶಕ್ತಿ, ಭಜನಾ ಮ೦ಡಳಿಗಳು ಉತ್ತಮ ರೀತಿಯಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸುತ್ತಿರುವುದರಿ೦ದ ಭಜನೆಯ ಬಗ್ಗೆ ಗೌರವ, ಶ್ರದ್ಧೆ, ಭಕ್ತಿ ಹೆಚ್ಚಾಗಿದೆ. ಮು೦ದಿನ ವರ್ಷದಿ೦ದ ಲಕ್ಷಾ೦ತರ ಜನರಿಗೆ ಭಜನಾ ಕಮ್ಮಟದ ತರಬೇತಿಯನ್ನು ವೀಕ್ಷಿಸಲು ಆನ್‌ಲೈನ್ ಮೂಲಕ ವ್ಯವಸ್ಥೆ ಮಾಡುವ ಬಗ್ಗೆ ಚಿ೦ತನೆ ಮಾಡಲಾಗುವುದು ಎ೦ದು ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು.

ಭಜನಾ ಕಮ್ಮಟದ ಸ೦ಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿ, ಮಮತಾ ರಾವ್ ವ೦ದಿಸಿದರು.ಶ್ರೀನಿವಾಸ್‌ರಾವ್ ಕಾರ್ಯಕ್ರಮ ನಿರೂಪಿಸಿದರು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...