Wednesday, April 10, 2024

ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಸೀಮನ್ಸ್ 32 ಸ್ಲೈಸ್ ಸಿ.ಟಿ ಸ್ಕ್ಯಾನ್ ‌ಲೋಕಾರ್ಪಣೆ

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ನೂತನವಾಗಿ ಅಳವಡಿಸಿರುವ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ 32 ಸ್ಲೈಸ್ ಸಿ.ಟಿ. ಸ್ಕ್ಯಾನ್ ಉಪಕರಣವನ್ನು ಇಂದು ಲೋಕಾರ್ಪಣೆಗೊಳಿಸಲಾಯಿತು.

ಲೋಕಾರ್ಪಣೆ ಮಾಡಿ ಮಾತನಾಡಿದ ಬೆಳ್ತಂಗಡಿ ವಿಧಾನಸಭಾ ಶಾಸಕ ಹರೀಶ್ ಪೂಂಜ, ಹಳ್ಳಿಯ ಜನತೆಗೆ ಅತ್ಯಾಧುನಿಕ ವೈದ್ಯಕೀಯ ಸೇವೆ ಸಿಗುವಂತಾಗಬೇಕೆಂಬ ವೀರೇಂದ್ರ ಹೆಗ್ಗಡೆಯವರ ಆಶಯ ಎಸ್.ಡಿ.ಎಂ. ಆಸ್ಪತ್ರೆಯ ಮೂಲಕ ಈಡೇರುತ್ತಿದೆ. ಆಸ್ಪತ್ರೆಯು ಅತ್ಯಾಧುನಿಕ ವೈದ್ಯಕೀಯ ಉಪಕರಣ, ನುರಿತ ವೈದ್ಯ ವೃಂದ ಹಾಗೂ ಅನುಭವಿ ಸಿಬ್ಬಂದಿಗಳನ್ನು ಬಳಸಿಕೊಂಡು ಜನತೆಗೆ ಉತ್ತಮ ಆರೋಗ್ಯ ಸೇವೆ ನೀಡುತ್ತಿದೆ ಎಂದರು. ಮೂಳೆ ಮತ್ತು ಕೀಲು ಸಮಸ್ಯೆ ಪತ್ತೆ ಹಚ್ಚುವಲ್ಲಿ ಸಹಕಾರಿಯಾಗಿರುವ ಈ ವೈದ್ಯಕೀಯ ಉಪಕರಣ ತಾಲೂಕಿನ ಜನತೆ ಮಾತ್ರವಲ್ಲದೇ ಯಾತ್ರಾರ್ಥಿಗಳಿಗೂ ಕೂಡ ಪ್ರಯೋಜನಕಾರಿಯಾಗಿದೆ. ಈ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ಸೇವಾ ಸೌಲಭ್ಯಗಳೊಂದಿಗೆ ಇನ್ನೂ ಹೆಚ್ಚಿನ ಆರೋಗ್ಯ ಸೇವೆ ಲಭಿಸುವಂತಾಗಲಿ ಎಂದು ಶುಭ ಹಾರೈಸಿದರು.

ಧರ್ಮಸ್ಥಳ ಎಸ್.ಕೆ.ಡಿ.ಅರ್.ಡಿ.ಪಿ.ಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಹೆಚ್. ಮಂಜುನಾಥ್, ಯೋಜನಾಧಿಕಾರಿ ಜಯಕರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ನೂತನ ಸಿ.ಟಿ ಸ್ಕ್ಯಾನ್ ‌ಉಪಕರಣ ತಾಲೂಕಿನ ಹಾಗೂ ಆಸುಪಾಸಿನ ತಾಲೂಕಿನ ಜನತೆಗೆ ವರದಾನವಾಗಲಿದೆ ಎಂದರು.

ಆಸ್ಪತ್ರೆಯ ವೈದ್ಯ ವೃಂದ, ದಾದಿಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಧರ್ಮಸ್ಥಳ ಎಸ್.ಡಿ.ಎಂ ಮೆಡಿಕಲ್‌ ಟ್ರಸ್ಟ್ ನ ಕಾರ್ಯದರ್ಶಿ ಶಿಶುಪಾಲ ಪೂವಣಿ ಅತಿಥಿಗಳನ್ನು ಸ್ವಾಗತಿಸಿದರು. ಎಸ್.ಡಿ.ಎಂ. ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಎಂ.ಕಾಶೀನಾಥ ಶೆಣೈ ವಂದಿಸಿದರು. ಡಾ| ಸಾತ್ವಿಕ್ ‌ಜೈನ್ ಅತಿಥಿಗಳನ್ನು ಹೂಗುಚ್ಚ ನೀಡಿ ಗೌರವಿಸಿದರು.

More from the blog

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...