Wednesday, April 17, 2024

ಛಾಯಾಗ್ರಾಹಕ ದಿನೇಶ್ ಶೆಟ್ಟಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಸವಾದ್ ಬಂಧನ

ಬಂಟ್ವಾಳ: ಫರಂಗಿಪೇಟೆಯಲ್ಲಿ ಛಾಯಾಗ್ರಾಹಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೋಲೀಸರು ಇಂದು ಫರಂಗಿಪೇಟೆಯಲ್ಲಿ ಬಂಧಿಸಿದ್ದಾರೆ.
ಸವಾದ್ (20) ಬಂಧಿತ ಆರೋಪಿ.
ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಕಾರ್ಯಚರಣೆ ನಡೆಸಿದ ಬಂಟ್ವಾಳ ಪೋಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಇನ್ನೋರ್ವ ಆರೋಪಿ ಸವಾದ್ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದರು.

ಆರೋಪಿಗಳಾದ ಅಮ್ಮೆಮ್ಮಾರು ನಿವಾಸಿ ಮಹಮ್ಮದ್ ಅರ್ಷದ್ (19), ಅಬ್ದುಲ್ ರೆಹಮಾನ್ (22) ಮತ್ತು ಮಹಮ್ಮದ್ ಸೈಪುದ್ದೀನ್ (22) ರನ್ನು ನಿನ್ನೆ ರಾತ್ರಿಯೆ ಬಂಧಿಸಲಾಗಿತ್ತು.
ಘಟನೆಯ ವಿವರ
ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಫ‌ರಂಗಿಪೇಟೆಯಲ್ಲಿ ಬುಧವಾರ ರಾತ್ರಿ 7.45ರ ಸುಮಾರಿಗೆ ಪುದು ಗ್ರಾಮದ ಕೊಟ್ಟಿಂಜ ನಿವಾಸಿ ದಿನೇಶ್‌ ಶೆಟ್ಟಿ ಎಂಬವರ ಸ್ಟುಡಿಯೋಕ್ಕೆ ನುಗ್ಗಿ ಅವರ ಮೇಲೆ ಚೂರಿಯಿಂದ ಹಲ್ಲೆ ನಡೆಸಲಾಗಿತ್ತು.
ದಿನೇಶ್ ಶೆಟ್ಟಿ ನಿನ್ನೆ ರಾತ್ರಿ 7.45ರ ಸುಮಾರಿಗೆ ಸ್ಟುಡಿಯೋದಲ್ಲಿದ್ದ ವೇಳೆ ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ಏಕಾಏಕಿ ನುಗ್ಗಿ ದಾಳಿ ನಡೆಸಿದೆ. ಘಟನೆಯಲ್ಲಿ ದಿನೇಶ್‌ ಅವರ ತಲೆ ಹಾಗೂ ಹೊಟ್ಟೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚೆಗೆ ಕುಂಪನಮಜಲು ಎಂಬಲ್ಲಿ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿತ್ತು. ಈ ಪ್ರಕರಣದಲ್ಲಿ ದಿನೇಶ್ ಶೆಟ್ಟಿ ಹೆಣ್ಣು ಮಗುವಿನ ಕಡೆಯವರಿಗೆ ಬೆಂಬಲ ನೀಡಿದ್ದರು. ಈ ದ್ವೇಷದಿಂದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿದ್ದ ಒಬ್ಬ, ದಿನೇಶ ಶೆಟ್ಟಿಯನ್ನು ಕೊಲ್ಲುವ ಉದ್ದೇಶದಿಂದ ದಾಳಿ ನಡೆಸಿದ್ದಾನೆ. ನಾಲ್ಕು ಮಂದಿಯ ತಂಡ ದಾಳಿ ನಡೆಸಿದ್ದು, ಕತ್ತಿಯಿಂದ ದಿನೇಶ್ ಶೆಟ್ಟಿಯವರ ತಲೆಗೆ, ಬಲ ಕೈಗೆ ಹಾಗೂ ಎಡ ಕಿಬ್ಬೊಟ್ಟೆಗೆ ಹಲ್ಲೆ ನಡೆಸಿದ್ದಾರೆ. ಆ ವೇಳೆಯಲ್ಲಿ ಅಲ್ಲಿದ್ದ ಶೇಖರ ಪೂಜಾರಿ, ಹಲ್ಲೆಯಾಗುವುದನ್ನು ತಪ್ಪಿಸಲು ಅಲ್ಲೇ ಇದ್ದ ಕುರ್ಚಿಯಿಂದ ಜೋರಾಗಿ ಇಬ್ಬರು ಆರೋಪಿಗಳಿಗೆ ಹೊಡೆದಿದ್ದಾರೆ. ಈ ವೇಳೆ ಆರೋಪಿಗಳ ಕೈಗೆ ಗಾಯವಾಗಿದೆ. ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ನಾಲ್ಕು ಆರೋಪಿಗಳನ್ನು ಬಂಧಿಸಲು ಯಶಸ್ಬಿಯಾಗಿದ್ದಾರೆ.

More from the blog

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...