Thursday, April 18, 2024

ಐಪಿಎಲ್ 2020: ಚೆನ್ನೈ ತಂಡವನ್ನು ಮಣಿಸಿದ ಹೈದ್ರಾಬಾದ್ ತಂಡ

ದುಬೈ : ಇಲ್ಲಿನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆ ಸನ್ ರೈಸರ್ ಹೈದ್ರಾಬಾದ್ ತಂಡ ಗೆಲ್ಲಲು 165 ರನ್ ಗಳ ಗುರಿ ನೀಡಿದ್ದು, ರನ್ ಗಳಿಸಲು ಚೆನ್ನೈ ತಂಡ ವಿಫಲವಾಗಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ ಹೈದ್ರಬಾದ್ ತಂಡ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ನಾಯಕ ಡೇವಿಡ್ ವಾರ್ನರ್ 28, ಮನೀಶ್ ಪಾಂಡೆ 29, ಪ್ರಿಯಮ್ ಗರ್ಗ್ ಅಜೇಯ 51, ಅಭಿಷೇಕ್ ಶರ್ಮಾ 31 ರನ್ ಸಿಡಿಸಿದರು. ಅಂತಿಮವಾಗಿ ಚೆನ್ನೈ ತಂಡಕ್ಕೆ ಗೆಲ್ಲಲು 165 ರನ್ ಗಳ ಗುರಿ ನೀಡಿತು.
165 ರನ್ ಗಳ ಗುರಿ ಬೆನ್ನತ್ತಿದ ಚೆನ್ನೈ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ಆರಂಭಿಕ ವೇಗವಾಗಿಯೇ ವಿಕೆಟ್ ಒಪ್ಪಿಸಿ ಫೆವೀಲಿಯನ್ ಪೆರೆಡ್ ನಡೆಸಿದರು. ಫಾಫ್ ಡ್ಯುಲ್ಪೆಸಿಸ್ 22, ವಾಟ್ಸನ್ 1, ಅಂಬಾಟಿ ರಾಯುಡ್ 8, ಕೇದರ್ ಜಾದವ್ 3 ರನ್ ಗಳಿಸಿ ಔಟಾದರೆ, ರವೀಂದ್ರ ಜಡೇಜಾ(50) ಅರ್ಧ ಶತಕ ಸಿಡಿಸಿ ತಂಡಕ್ಕೆ ನೆರವಾದರು.

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...